Categories: ದೆಹಲಿ

ಮಹಿಳೆಯರಿಗೆ ಮತ್ತೊಂದು ಗ್ಯಾರೆಂಟಿ ಘೋಷಿಸಿದ ಕಾಂಗ್ರೆಸ್‌

ನವದೆಹಲಿ: ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಸರ್ಕಾರಿ ಉದ್ಯೋಗಗಳಲ್ಲಿ ಶೇ.೫೦ ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ ಹೊಸ ಭರವಸೆ ನೀಡಿದ್ದಾರೆ.

ಭಾರತದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ವ್ಯವಸ್ಥೆಯಲ್ಲಿ ಅಷ್ಟೇ ಪ್ರಮಾಣದಲ್ಲಿ ಭಾಗಿಯಾಗಲು ಅವಕಾಶ ನೀಡುತ್ತೇವೆ ಎಂದ ಅವರು, ಅರ್ಧ ಜನಸಂಖ್ಯೆಗೆ ಪೂರ್ತಿ ಹಕ್ಕನ್ನು ಕಾಂಗ್ರೆಸ್ ಬಯಸುತ್ತದೆ. ಹೀಗೆ ಮಾಡಿದಾಗ ಮಾತ್ರ ಮಹಿಳೆಯರ ಸಾಮರ್ಥ್ಯವನ್ನು ಸಂಪೂರ್ಣವಾಗಿ ಬಳಸಿಕೊಳ್ಳಲಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಇದಕ್ಕೂ ಮೊದಲು ಮಹಿಳೆಯರಿಗಾಗಿ ಕಾಂಗ್ರೆಸ್‌ ಮಹಾಲಕ್ಷ್ಮಿ, ಶಕ್ತಿ ಕಾ ಸಮ್ಮಾನ್, ಅಧಿಕಾರ್ ಮೈತ್ರಿ, ಸಾವಿತ್ರಿ ಬಾಯಿ ಫುಲೆ ಹಾಸ್ಟೆಲ್‌ಗಳಂತಹ ಐದು ಭರವಸೆಗಳನ್ನು ಘೋಷಿಸಿತ್ತು.

Maithri S

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

2 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago