ದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಭಾಗವಹಿಸುವ ಸಾಧ್ಯತೆ ಇದೆ ಹೇಳಲಾಗಿದೆ.
ನರೇಂದ್ರ ಮೋದಿ ಅವರು ಜನವರಿಗೆ 22ರಂದು ರಾಮಮಂದಿರದ ಲೋರ್ಕಾಪಣೆ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಸೋನಿಯಾ ಗಾಂಧಿ ಅವರು ಭಾಗಿಯಾಗುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.ಈ ಹಿಂದೆ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಅವರು ಸೋನಿಯಾ ಗಾಂಧಿ ಅವರನ್ನು ಪ್ರತಿನಿಧಿಸುವ ನಿಯೋಗ ರಾಮಮಂದಿರದಲ್ಲಿ ಇರಲಿದೆ ಎಂದು ಹೇಳಿದ್ದಾರೆ.