News Karnataka Kannada
Monday, April 29 2024
ದೆಹಲಿ

ರಾಮಮಂದಿರದ ಲೋಕಾರ್ಪಣೆಗೆ ಕಾಂಗ್ರೆಸ್ ಗೈರು: ‘ಕೈ’ ಪಕ್ಷದಲ್ಲೇ ಭಿನ್ನಾಭಿಪ್ರಾಯ

ಅಯೋಧ್ಯೆ ರಾಮಮಂದಿರ ಉದ್ಘಾಟನೆಯಿಂದ ಕಾಂಗ್ರೆಸ್ ನಾಯಕರು ದೂರ ಉಳಿಯುತ್ತಿರೋದು ಪಕ್ಷದಲ್ಲೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. 
Photo Credit : News Kannada

ನವದೆಹಲಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆಯಿಂದ ಕಾಂಗ್ರೆಸ್ ನಾಯಕರು ದೂರ ಉಳಿಯುತ್ತಿರೋದು ಪಕ್ಷದಲ್ಲೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ.

ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಅರ್ಜುನ್ ಮೋಧ್ವಾಡಿಯಾ ಅವರು ಸೋಷಿಯಲ್ ಮೀಡಿಯಾದಲ್ಲಿ ಬಹಿರಂಗವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ

ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಮೋಧ್ವಾಡಿಯಾ ಅವರು ಜನವರಿಂದ 22ರಂದು ನಡೆಯುವ ರಾಮ ಮಂದಿರ ಉದ್ಘಾಟನೆಗೆ ಭಾಗಿಯಾಗದಿರಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ. ಆದರೆ ಇದು ಲೋಕಸಭಾ ಚುನಾವಣೆಯನ್ನ ಎದುರಿಸುವ ಸಮಯ. ಈ ನಿರ್ಧಾರದಿಂದ ಕಾಂಗ್ರೆಸ್​ಗೆ ಹೊಡೆತ ಬೀಳುವ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ಶ್ರೀರಾಮ ಆರಾಧ್ಯ ದೈವ, ದೇಶವಾಸಿಗಳ ನಂಬಿಕೆ, ವಿಶ್ವಾಸದ ವಿಷಯ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹಿಂದೂಗಳ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಪ್ರಚಾರ ಮಾಡುವ ಸಾಧ್ಯತೆ ಇದೆ ಎಂದು ಅರ್ಜುನ್ ಮೋಧ್ವಾಡಿಯಾ ತಮ್ಮ ಬೇಸರ ವ್ಯಕ್ತಪಡಿಸಿದ್ದಾರೆ.

 

ರಾಮಮಂದಿರ ಉದ್ಘಾಟನೆಗೆ ಹೋಗದಿದ್ರೆ ಲಾಭವಾಗದಿದ್ರೂ ನಷ್ಟವಾಗುತ್ತಿರಲಿಲ್ಲ. ಸಾಫ್ಟ್ ಹಿಂದುತ್ವದ ಬದಲು ಮಂದಿರ ಉದ್ಘಾಟನೆಗೆ ಹೋಗಬೇಕಿತ್ತು. ಇದಕ್ಕೆ ವ್ಯತಿರಿಕ್ತವಾಗಿ ಉದ್ಘಾಟನೆಗೆ ಹೋಗದಿರುವ ನಿರ್ಧಾರ ಸರಿಯಲ್ಲ ಎಂದು ಅರ್ಜುನ್ ಮೋಧ್ವಾಡಿಯಾ ಹೇಳಿದ್ದಾರೆ.

 

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು