News Karnataka Kannada
Monday, April 29 2024
ದೆಹಲಿ

ಲೋಕಸಭಾ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ನ ನಾಲ್ಕನೇ ಪಟ್ಟಿ ಘೋಷಣೆಯಾಗಿದೆ. ಒಟ್ಟು 46 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ.
Photo Credit : News Kannada

ನವದೆಹಲಿ: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಸರಣಿ ಸಭೆಗಳ ನಂತರ ಇಂದು ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಕೆ.ಸಿ.ವೇಣುಗೇಪಾಲ್‌, ಅಜಯ್ ಮಕೇನ್‌, ಪವನ್ ಖೇರಾ ಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಕರ್ನಾಟಕದ 7, ತೆಲಂಗಾಣದ 4, ಛತ್ತೀಸ್​ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ​ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಈ ಮೂಲಕ ಒಟ್ಟು 39 ಅಭ್ಯರ್ಥಿಗಳ ಪಟ್ಟಿಯನ್ನು ಬಿಡಗಡೆ ಮಾಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಇನ್ನು ಶಶಿ ತರೂರ್​ ಅವರಿಗೆ ತಿರುವನಂತಪುರಂ ಕ್ಷೇತ್ರದ ಟಿಕೆಟ್ ನೀಡಲಾಗಿದೆ.

ಕರ್ನಾಟಕದ 7 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟ

ಹಾವೇರಿ – ಆನಂದಸ್ವಾಮಿ ಗಡ್ಡದೇವ್ರು ಮಠ
ತುಮಕೂರು – ಮುದ್ದಹನುಮೇಗೌಡ – ಒಕ್ಕಲಿಗ
ಶಿವಮೊಗ್ಗ – ಗೀತಾ ಶಿವರಾಜ್ ಕುಮಾರ್ – ಈಡಿಗ
ಹಾಸನ – ಶ್ರೇಯಸ್ ಪಟೇಲ್ – ಒಕ್ಕಲಿಗ
ವಿಜಯಪುರ – ರಾಜು ಆಲಗೂರು – ಎಸ್.ಸಿ
ಮಂಡ್ಯ – ವೆಂಕಟರಮಣೇಗೌಡ (ಸ್ಟಾರ್ ಚಂದ್ರು) – ಒಕ್ಕಲಿಗ
ಬೆಂಗಳೂರು ಗ್ರಾಮಾಂತರ – ಡಿಕೆ ಸುರೇಶ್ – ಒಕ್ಕಲಿಗ

ತೆಲಂಗಾಣದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟ :

ಜಹೀರಾಬಾದ್ ಕ್ಷೇತ್ರ- ಸುರೇಶ್ ಕುಮಾರ್ ಶೆಟ್ಕರ್
ಚೇವೆಲ್ಲಾ ಕ್ಷೇತ್ರ ಸುನೀತಾ ಮಹೇಂದರ್ ರೆಡ್ಡಿ
ನಲ್ಗೊಂಡ ಕ್ಷೇತ್ರ- ಕುಂದೂರು ರಘುವೀರ್
ಮಹಬೂಬಾಬಾದ್ ಕ್ಷೇತ್ರ (ಎಸ್‌ಟಿ )- ಪೋರಿಕ ಬಲರಾಮ್ ನಾಯಕ್​ಗೆ ಟಿಕೆಟ್​ ನೀಡಲಾಗಿದೆ.

ಕೇರಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

ವಯನಾಡ್ (ಕೇರಳ): ರಾಹುಲ್ ಗಾಂಧಿ
ಕಾಸರಗೋಡು (ಕೇರಳ): ರಾಜಮೋಹನ್ ಉಣ್ಣಿತ್ತಾನ್
ಕಣ್ಣೂರು (ಕೇರಳ): ಕೆ ಸುಧಾಕರನ್
ವಡಕರ (ಕೇರಳ): ಶಫಿ ಪರಂಬಿಲ್
ಕೋಝಿಕ್ಕೋಡ್ (ಕೇರಳ): ಎಂಕೆ ರಾಘವನ್
ಪಾಲಕ್ಕಾಡ್ (ಕೇರಳ): ವಿಕೆ ಶ್ರೀಕಂಠನ್
ಅಲತೂರ್(ಎಸ್‌ಸಿ) (ಕೇರಳ): ರೆಮ್ಯಾ ಹರಿದಾಸ್
ತ್ರಿಶೂರ್ (ಕೇರಳ): ಕೆ ಮರಳೀಧರನ್
ಚಾಲಕ್ಕುಡಿ (ಕೇರಳ): ಬೆನ್ನಿ ಬಹನ್ನಾನ್
ಎರ್ನಾಕುಲಂ(ಕೇರಳ): ಹಿಬಿ ಇಡೆನ್
ಇಡುಕ್ಕಿ(ಕೇರಳ): ಡೀನ್ ಕುರಿಯಾಕೋಸ್
ಮಾವೇಲಿಕರ(ಎಸ್‌ಸಿ)(ಕೇರಳ): ಕೋಡಿಕುನ್ನಿಲ್ ಸುರೇಶ್
ಪಟ್ಟಣಂತಿಟ್ಟ(ಕೇರಳ): ಆ್ಯಂಟೋ ಆ್ಯಂಟೋನಿ
ಅತ್ತಿಂಗಲ್(ಕೇರಳ): ಅಡೂರ್ ಪ್ರಕಾಶ್

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು