ದೆಹಲಿ

ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಕೊರೋನಾ ಹೆಚ್ಚಳ, ಜನರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚನೆ

ದೆಹಲಿ:  ಕೊರೋನಾ ಸೋಂಕಿನಲ್ಲಿ ಹೆಚ್ಚಳವಾಗುತ್ತಿದ್ದು, ಪಾಸಿಟಿವಿಟಿ ದರವು ಸಹ ಏರುಗತಿಯತ್ತ ಸಾಗುತ್ತಿದೆ. ಹೀಗಾಗಿ ಸಾಂಕ್ರಾಮಿಕ ಇನ್ನೂ ಅಂತ್ಯಗೊಂಡಿಲ್ಲದ ಹಿನ್ನೆಲೆ ಕೊರೋನಾ ತಡೆಯ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ದಿಲ್ಲಿ ಲೆಫ್ಟಿನಂಟ್ ಗವರ್ನರ್ ವಿನಯ್ ಕುಮಾರ್ ಸಕ್ಕೇನಾ ಟ್ವಿಟ್ ಮಾಡಿದ್ದಾರೆ.

ಸೋಂಕಿನಿಂದ ಚೇತರಿಸಿ ಕೊಳ್ಳುತ್ತಿರುವವರ ಪ್ರಮಾಣವು ಉತ್ತಮ ವಾಗಿರುವುದು ಕೊಂಚ ಸಮಾಧಾನಕರ ಸಂಗತಿಯಾಗಿದೆ. ಆದರೆ, ಪ್ರಕರಣಗಳ ಏರಿಕೆ ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಪ್ರಸ್ತುತ ಕೊರೋನಾಗಾಗಿ ಮೀಸಲಿರಿಸಲಾಗಿರುವ 9,000 ಹಾಸಿಗೆಗಳಲ್ಲಿ 500 ಭರ್ತಿಯಾಗಿವೆ.

ಇದರಲ್ಲಿ 2,129 ಐಸಿಯು ಹಾಸಿಗೆಗಳಿದ್ದು, ಈ ಪೈಕಿ 20 ಭರ್ತಿಯಾಗಿವೆ. ಹಾಗೆಯೇ 65 ರೋಗಿಗಳು ವೆಂಟಿಲೇಷನ್‌ನಲ್ಲಿದ್ದಾರೆ ಎಂದು ಸಾರ್ವಜನಿಕ ಆರೋಗ್ಯ ತಜ್ಞೆ ಡಾ. ಸುಶೀಲಾ ಗರ್ಗ್ ತಿಳಿಸಿದ್ದಾರೆ.

ಕೊರೋನಾ ಪ್ರಕರಣಗಳ ಏರಿಕೆಯಿಂದ ಗಾಬರಿಗೊಳಗಾಗುವ ಅಗತ್ಯವಿಲ್ಲ. ಆದರೆ, ಇದು ಎಚ್ಚರಿಕೆಯ ಗಂಟೆ ಎನ್ನುವುದನ್ನೂ ಅಲ್ಲಗಳೆಯುವಂತಿಲ್ಲ ಎಂದೂ ಡಾ. ಗರ್ಗ್ ಹೇಳಿದ್ದಾರೆ.

Sneha Gowda

Recent Posts

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

15 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

27 mins ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

44 mins ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

55 mins ago

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

2 hours ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

2 hours ago