News Karnataka Kannada
Sunday, April 28 2024
ದೆಹಲಿ

ಕ್ರಿಮಿನಲ್‌ ಕಾನೂನು ಮಸೂದೆ ಹಿಂಪಡೆದು ಹೊಸ ವಿಧೇಯಕ ಮಂಡನೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್‌ ಕಾಲದ ಹಳೆಯ ಮೂರು ಕ್ರಿಮಿನಲ್‌ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಮಂಗಳವಾರ ಹಿಂಪಡೆದಿದ್ದು, ಹೊಸ ಕರಡು ವಿಧೇಯಕಗಳನ್ನು ಮಂಡಿಸಿದ್ದಾರೆ.
Photo Credit : News Kannada

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬ್ರಿಟಿಷ್‌ ಕಾಲದ ಹಳೆಯ ಮೂರು ಕ್ರಿಮಿನಲ್‌ ಕಾನೂನುಗಳನ್ನು ಬದಲಿಸುವ ಮೂರು ಮಸೂದೆಗಳನ್ನು ಮಂಗಳವಾರ ಹಿಂಪಡೆದಿದ್ದು, ಹೊಸ ಕರಡು ವಿಧೇಯಕಗಳನ್ನು ಮಂಡಿಸಿದ್ದಾರೆ.

ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸುಗಳ ನಂತರ ಕೇಂದ್ರ ಸರ್ಕಾರ ಈ ಹಿಂದೆ ಲೋಕಸಭೆಯಲ್ಲಿ ಮಂಡಿಸಿದ್ದ ಕ್ರಿಮಿನಲ್ ಪ್ರೊಸೀಜರ್ ಕೋಡ್- 1898, ಭಾರತೀಯ ದಂಡ ಸಂಹಿತೆ- 1860, ಇಂಡಿಯನ್ ಎವಿಡೆನ್ಸ್ ಆಕ್ಟ್- 1872 ಒಳಗೊಂಡ ಮಸೂದೆಗಳನ್ನು ಹಿಂಪಡೆಯಲಾಗಿದೆ.

ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಮುಂಗಾರು ಅಧಿವೇಶನದ ವೇಳೆ ಈ ಮೂರು ವಿಧೇಯಕಗಳನ್ನು ಮಂಡಿಸಲಾಗಿತ್ತು. ಆದರೆ ಅವುಗಳಿಗೆ ಸಂಸದೀಯ ಸ್ಥಾಯಿ ಸಮಿತಿ ಕೆಲವು ಬದಲಾವಣೆಗಳನ್ನು ಶಿಫಾರಸು ಮಾಡಿತ್ತು. ಹೀಗಾಗಿ ಇಂದು ಆ ಶಿಫಾರಸುಗಳನ್ನು ಒಳಗೊಂಡಿರುವ ಹೊಸ ಕರಡು ವಿಧೇಯಕಗಳನ್ನು ಮಂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು