News Karnataka Kannada
Saturday, May 11 2024
ದೆಹಲಿ

ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Dates for assembly elections in five states announced
Photo Credit : News Kannada

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದೇ ವಿಶ್ಲೇಷಿಸಲಾಗುತ್ತಿರುವ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣೆ ಆಯೋಗವು ದಿನಾಂಕ ಘೋಷಿಸಿದೆ. ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ, ಮಿಜೋರಾಂ ಹಾಗೂ ಛತ್ತೀಸ್‌ಗಢದಲ್ಲಿ ವಿಧಾನಸಭೆ ಚುನಾವಣೆಗೆ ಆಯೋಗವು ಸುದ್ದಿಗೋಷ್ಠಿ ಮೂಲಕ ದಿನಾಂಕ ಘೋಷಿಸಿದೆ. ಡಿಸೆಂಬರ್ 3ರಂದು ಐದೂ ರಾಜ್ಯಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ಮಧ್ಯಪ್ರದೇಶ ಹಾಗೂ ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದೆ, ಛತ್ತೀಸ್​ಗಢದಲ್ಲಿ ನವೆಂಬರ್ 7 ಹಾಗೂ 17ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ, ರಾಜಸ್ಥಾನದಲ್ಲಿ ನವೆಂಬರ್ 23ರಂದು ಹಾಗೂ ತೆಲಂಗಾಣದಲ್ಲಿ ನವೆಂಬರ್ 30ರಂದು ಮತದಾನ ನಡೆಯಲಿದೆ.

ಐದು ಚುನಾವಣೆಗೆ ಒಳಪಟ್ಟಿರುವ ರಾಜ್ಯಗಳಲ್ಲಿ ಪುರುಷ ಮತದಾರರ ಸಂಖ್ಯೆ 8.24 ಕೋಟಿ ಮಹಿಳಾ ಮತದಾರರ ಸಂಖ್ಯೆ 7.88 ಕೋಟಿಯಷ್ಟಿದೆ. ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರ ಸಂಖ್ಯೆ 60 ಲಕ್ಷವಿದೆ ಎಂದು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು