Categories: ದೆಹಲಿ

ದೆಹಲಿ: ಪ್ರತಿಯೊಂದು ಮನೆಗೆ ಪುತ್ರಿಯರು ಭಾರವಲ್ಲ ಎಂದ ಸುಪ್ರೀಂ ಕೋರ್ಟ್

ದೆಹಲಿ: ಪ್ರತಿಯೊಂದು ಮನೆಗೆ ಪುತ್ರಿಯರು ಭಾರವಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮಹಿಳೆಗೆ ಆಕೆಯ ತಂದೆಯಿಂದ ಜೀವನಾಂಶ ನೀಡುವ ವಿಷಯಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ನಡೆಸಿದ ನ್ಯಾಯಮೂರ್ತಿಗಳಾದ ಡಿವೈ ಚಂದ್ರಚೂಡ್ ಮತ್ತು ಎಎಸ್ ಬೋಪಣ್ಣ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಮಹಿಳೆ ಪರ ವಕೀಲರು ಹೆಣ್ಣು ಮಕ್ಕಳೆಂದರೆ ಮನೆಗೆ ಭಾರ ಎಂದು ಹೇಳಿದ್ದರು. ಈ ವೇಳೆ ಸಂವಿಧಾನದ ಪರಿಚ್ಛೇದ 14 ನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ಚಂದ್ರಚೂಡ್, ಮಹಿಳೆಯರು ಕುಟುಂಬಕ್ಕೆ ಭಾರವಲ್ಲ ಎಂದರು.

ಕಕ್ಷಿದಾರರು ತನ್ನ ಮಗಳಿಗೆ ಪ್ರತಿ ತಿಂಗಳಿಗೆ ನೀಡಬೇಕಿದ್ದ 8 ಸಾವಿರ ರೂಪಾಯಿ ಹಾಗೂ ಪತ್ನಿಗೆ ಪ್ರತಿ ತಿಂಗಳಿಗೆ ನೀಡಬೇಕಿದ್ದ 400 ರೂಪಾಯಿ ಜೀವನಾಂಶದ ಮೊತ್ತವನ್ನು ಏಪ್ರಿಲ್ 2018 ರಿಂದ ನೀಡಿಲ್ಲ ಎಂದು ಕಕ್ಷಿದಾರರ ವಕೀಲರು ಅಕ್ಟೋಬರ್ 2020ರಲ್ಲಿ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದರು. ಇದನ್ನು ಪರಿಗಣಿಸಿದ್ದ ನ್ಯಾಯಾಲಯ, ಮಗಳು ಹಾಗೂ ಪತ್ನಿಗೆ ಎರಡು ವಾರಗಳಲ್ಲಿ 2,50,000 ರೂಪಾಯಿಗಳನ್ನು ಪಾವತಿಸುವಂತೆ ಆದೇಶ ನೀಡಿತ್ತು.

ಇದೇ ವರ್ಷದ ಮೇ ತಿಂಗಳಲ್ಲಿ ಪ್ರಕರಣ ಮತ್ತೆ ವಿಚಾರಣೆಗೆ ಬಂದಾಗ ಕಳೆದ ವರ್ಷವೇ ಪತ್ನಿ ತೀರಿಕೊಂಡಿದ್ದಾರೆ ಎಂದು ತಿಳಿಸಲಾಗಿತ್ತು. ತಮ್ಮ ಕಕ್ಷಿದಾರರು ಮಗಳು ಹಾಗೂ ಪತ್ನಿಗೆ ನೀಡಬೇಕಿದ್ದ ಎಲ್ಲ ಜೀವನಾಂಶವನ್ನು ನೀಡಿದ್ದಾರೆ ಎಂದು ತಿಳಿಸಿ ಅದಕ್ಕೆ ಸಂಬಂಧಿಸಿದ ಬ್ಯಾಂಕ್ ದಾಖಲೆಗಳನ್ನು ಸಲ್ಲಿಸಿದ್ದರು.

ಈ ಪ್ರಕರಣದ ಮತ್ತೊಮ್ಮೆ ವಿಚಾರಣೆಗೆ ಬಂದಾಗ, ಕಕ್ಷಿದಾರರ ಪುತ್ರಿ ಈಗ ಲಾಯರ್ ಆಗಿದ್ದು, ನ್ಯಾಯಾಂಗ ಇಲಾಖೆಯ ಪ್ರಿಲಿಮ್ಸ್ ಪರೀಕ್ಷೆ ಪಾಸು ಮಾಡಿರುವುದಾಗಿ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಯಿತು. ಮಹಿಳೆಯು ತನ್ನ ತಂದೆಯ ಮೇಲೆ ಅವಲಂಬಿತವಾಗಿರುವ ಬದಲಾಗಿ ಅಧ್ಯಯನಗಳ ಕಡೆಗೆ ಗಮನಹರಿಸುವುದು ಸೂಕ್ತ ಎಂದು ನ್ಯಾಯಾಲಯ ಹೇಳಿತು.

ಮಹಿಳೆ ಹಾಗೂ ಆಕೆಯ ತಂದೆ ಕಳೆದ ಹಲವಾರು ವರ್ಷಗಳಿಂದ ಮಾತನಾಡಿಲ್ಲ . ಇಬ್ಬರೂ ಮಾತುಕತೆ ಆರಂಭಿಸುವಂತೆ ಸಲಹೆ ನೀಡಿದೆ. ಅಲ್ಲದೆ ಮಹಿಳೆಗೆ ಆಕೆಯ ತಂದೆ ಆಗಸ್ಟ್ 8 ರೊಳಗೆ 50 ಸಾವಿರ ರೂಪಾಯಿ ನೀಡುವಂತೆ ಆದೇಶಿಸಿದೆ.

Sneha Gowda

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

14 mins ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

36 mins ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

58 mins ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

1 hour ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

1 hour ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

2 hours ago