Categories: ದೆಹಲಿ

ದೆಹಲಿ: ದೇಶದ 11 ರಾಜ್ಯಗಳಲ್ಲಿ 25 ಶಂಕಿತ ಐಎಸ್ ಉಗ್ರರ ಬೇಟೆ

ದೆಹಲಿ: ಕರ್ನಾಟಕ, ತಮಿಳುನಾಡಿನಲ್ಲಿ ಇಸ್ಲಾಮಿಕ್ ಸ್ಟೇಟ್ಸ್ ಮತ್ತು ಅಲ್ ಖೈದಾ ನಂಟಿನ ಇಸ್ಲಾಮಿಕ್ ತೀವ್ರವಾದಿಗಳನ್ನು ಬಂಧಿಸಿದ ಬೆನ್ನಿಗೇ, 11 ರಾಜ್ಯಗಳಲ್ಲಿ ನಡೆದ ದಾಳಿಗಳಲ್ಲಿ ಇಸ್ಲಾಮಿಕ್ ಸ್ಟೇಟ್‌ನ ಬೆಂಬಲಿಗರಾದ 25 ಮಂದಿಯನ್ನು ಬಂಧಿಸಲಾಗಿದೆ.

ಬಂಧಿತರ ವಿಚಾರಣೆ ವೇಳೆ ದೇಶದಲ್ಲಿ ಹಿಂಸಾತ್ಮಕ ದಾಳಿಗಳಿಗೆ ಸಿದ್ಧತೆ ನಡೆದಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ ಎಂದು ಮೂಲಗಳು ಹೇಳಿವೆ.

ಕರ್ನಾಟಕ, ಮಹಾರಾಷ್ಟ್ರ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್, ತಮಿಳುನಾಡು, ಕೇರಳ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಗುಜರಾತ್, ರಾಜಸ್ತಾನಗಳಲ್ಲಿ ಈ ಕಾರ್ಯಾಚರಣೆ ನಡೆದಿದೆ. ಬಂಧಿತರ ಮೇಲೆ ಕಳೆದ ಕೆಲವು ಸಮಯದಿಂದ ಗುಪ್ತಚರ ಸಂಸ್ಥೆಗಳು ನಿಗಾ ಇಟ್ಟಿದ್ದವು. ಐಎಸ್ ವಿಚಾರಗಳಿಂದ ಪ್ರಚೋದಿತರಾಗಿ ಹಿಂಸಾಕೃತ್ಯಗಳಿಗೆ ಮುಂದಾಗಿರುವ ಬಗ್ಗೆ ಸುಳಿವು ಲಭಿಸಿದ ಬೆನ್ನಿಗೇ ಕಾರ್ಯಾಚರಣೆ ಆರಂಭಿಸಲಾಗಿತ್ತು.

ತಮಿಳುನಾಡು ಪೊಲೀಸರು ಇಸ್ಲಾಮಿಕ್ ಸ್ಟೇಟ್ಸ್‌ನ (ಐಎಸ್) ಬೆಂಬಲಿಗರಾದ ಈರೋಡ್ ಮೂಲದ ಆಸೀಫ್ ಮುಸ್ತೀನ್ ಮತ್ತು ಈತನ ಸಹಚರ ಯಾಸಿರ್ ನವಾಬ್ ಜಾನ್‌ನನ್ನು ಬಂಧಿಸಿ ಅವರಿಂದ ಹಲವು ವಸ್ತು ಮತ್ತು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿತ್ತು. ಪೊಲೀಸ್ ಮೂಲಗಳ ಪ್ರಕಾರ ಚೂರಿ, ಕಪ್ಪು ಐಎಸ್ ಧ್ವಜ, ಪ್ರಚೋದನಾಕಾರಿ ದಾಖಲೆಗಳು, ಡಿಜಿಟಲ್ ಮೀಡಿಯಾ ಸಾಧನಗಳನ್ನು ವಶಪಡಿಸಿಕೊಂಡ ಬೆನ್ನಿಗೇ, ದೇಶದ ಹಲವು ರಾಜ್ಯಗಳಲ್ಲಿ ಭಯೋತ್ಪಾದಕ ನಿಗ್ರಹ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

ತನಿಖೆಯ ವೇಳೆ ದೇಶದಲ್ಲಿ ಭಯೋತ್ಪಾದಕ ಐಎಸ್‌ನ ಮ್ಯಾಗಜೀನ್ ‘ವಾಯ್ಸ್ ಆಫ್ ಹಿಂದ್’ನ ಪ್ರಚಾರಕ್ಕೂ ವ್ಯವಸ್ಥಿತ ಕಾರಸ್ಥಾನ ರೂಪಿಸಲಾಗಿದ್ದು, ಇದರಲ್ಲಿ ಶಾಮೀಲಾಗಿರುವ ಶಕ್ತಿಗಳನ್ನು ಈಗ ಗುರುತಿಸಲಾಗಿದ್ದು, ಈಗ ಐಎಸ್‌ನ ‘ಡಿಜಿಟಲ್ ವಾರಿಯರ್’ ಗಳಿಗಾಗಿಯೂ ಶೋಧ ಕಾರ್ಯಾಚರಣೆ ನಡೆದಿದೆ.

ವಿವಿಧ ಚಾನೆಲ್‌ಗಳು ಮತ್ತು ವೆಬ್ ಜಾಲಗಳನ್ನು ಹಿಂದು -ಭಾರತ ವಿರೋಧಿ ಪ್ರಚಾರ, ಭಯೋತ್ಪಾದನೆ ಪರವಾಗಿ ಜಿಹಾದಿ ಶಕ್ತಿಗಳು ಬಳಸಿಕೊಳ್ಳುತ್ತಿರುವ ಆಘಾತಕಾರಿ ಮಾಹಿತಿಗಳೂ ವ್ಯಕ್ತವಾಗಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳು ಒದಗಿಸಿದ ಮಾಹಿತಿಗಳ ಆಧಾರದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

7 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

7 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

9 hours ago