News Karnataka Kannada
Monday, May 13 2024
ದೆಹಲಿ

ದೆಹಲಿ: ನಿರ್ಮಾಣ ಹಂತದ ಗೋದಾಮಿನ ಗೋಡೆ ಕುಸಿದು ಐವರು ಸಾವು!

Ullal: Man commits suicide by pouring petrol
Photo Credit : Wikimedia

ದೆಹಲಿ: ಅಲಿಪುರ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಗೋಡೌನ್‌ನ ಗೋಡೆ ಕುಸಿದು ಬಿದ್ದ ಪರಿಣಾಮ ಐವರು ಸಾವನ್ನಪ್ಪಿ ಒಂಬತ್ತು ಮಂದಿ ಗಾಯಗೊಂಡ ದುರಂತ ಸಂಭವಿಸಿದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಟ್ಟಡವು ಅನಧಿಕೃತವಾಗಿ ನಿರ್ಮಾಣವಾಗಿದೆ ಎಂದು ತಿಳಿದುಬಂದಿದ್ದು,  ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ನಿರ್ಮಾಣ ಹಂತದಲ್ಲಿರುವ ಗೋದಾಮಿನ ಸುಮಾರು 100 ಅಡಿ ಉದ್ದ ಮತ್ತು 15 ಅಡಿ ಎತ್ತರದ ಗೋಡೆ ಕುಸಿದಿರುವುದು ಕಂಡುಬಂದಿದೆ. ಗೋಡೆಯ ಪಕ್ಕದಲ್ಲಿ ಅಡಿಪಾಯವನ್ನು ಅಗೆಯುತ್ತಿದ್ದ ಸುಮಾರು 20 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರನ್ನು ಪ್ರಮೋದ್ (45) ಗೋವಿಂದ್ ಪ್ರಸಾದ್ ಅಲಿಯಾಸ್ ಬಬ್ಲು (30); ಪ್ರಮೋದ್ ಕುಮಾರ್ (35), ರಿಷಿಪಾಲ್ (40) ಮತ್ತು ಪ್ರಮೋದ್ (35) ಎಂದು ಗುರುತಿಸಲಾಗಿದೆ.

ಈ ಜಮೀನು ಮಾಲೀಕನನ್ನು ಅಲಿಪುರ ಪ್ರದೇಶದ ಬಕೋಲಿ ನಿವಾಸಿ ಶಕ್ತಿ ಸಿಂಗ್ (40) ಎಂದು ಗುರುತಿಸಲಾಗಿದ್ದು, ಗುತ್ತಿಗೆದಾರ ಸಿಕಂದರ್ ಎಂದು ಗುರುತಿಸಲಾಗಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು