ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದೆ.
ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ವಿರುದ್ಧ ಕ್ರಮ ಕೈಗೊಳ್ಳದಂತೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೇಜ್ರಿವಾಲ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಜತೆಗೆ ಅಬಕಾರಿ ಹಗರಣ ಕೇಸ್ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಆದೇಶಿಸಿತ್ತು.
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ.