News Karnataka Kannada
Friday, May 03 2024
ದೆಹಲಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಮೇ 7 ರವರೆಗೆ ವಿಸ್ತರಣೆ

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.
Photo Credit : NewsKarnataka

ದೆಹಲಿ: ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಮೇ 7ರವರೆಗೆ ವಿಸ್ತರಿಸಿದೆ.

ಹಾಗೆಯೇ ಬಿಆರ್​ಎಸ್ ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನೂ ಕೂಡ ವಿಸ್ತರಿಸಲಾಗಿದೆ.

ಇದಕ್ಕೂ ಮುನ್ನ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಏಪ್ರಿಲ್ 1 ರಿಂದ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು. ಇದಾದ ಬಳಿಕ ನ್ಯಾಯಾಲಯ ಮತ್ತೊಮ್ಮೆ ಅವರ ನ್ಯಾಯಾಂಗ ಬಂಧನವನ್ನು ಏಪ್ರಿಲ್ 23ರವರೆಗೆ ವಿಸ್ತರಿಸಿತ್ತು ಈಗ ಮೇ 7ರವರೆಗೆ ವಿಸ್ತರಿಸಿದೆ.

ಈ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಇಡಿ ಬಂಧಿಸಿತ್ತು. ಇದೀಗ ಮೇ 7ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ದೆಹಲಿ ಸರ್ಕಾರದ ಹೊಸ ಅಬಕಾರಿ ನೀತಿಯ ಅಕ್ರಮದಲ್ಲಿ ಸಿಎಂ ಆಗಿ ಅರವಿಂದ್ ಕೇಜ್ರಿವಾಲ್ ಪಾತ್ರ ಗುರುತರವಾಗಿದೆ ಎನ್ನುವುದಕ್ಕೆ, ಮತ್ತು ಅಕ್ರಮದಿಂದ ಬಂದ ಲಾಭವನ್ನು ಮರೆಮಾಚುವ ಪ್ರಯತ್ನ ಮಾಡಿದ್ದರು ಎನ್ನುವುದಕ್ಕೆ ಇಡಿ ಬಲವಾದ ದಾಖಲೆಗಳನ್ನು ಹೊಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು