ನವದೆಹಲಿ: ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಮತ್ತು ವಿನೋದ್ ತೋಮರ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ. ಒಂದು ಕಡೆ ದೇಶದ ತುಂಬೆಲ್ಲಾ ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಕೂಗು ಕೇಳಿಬರುತ್ತಿದೆ.
2012 ರಿಂದ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಮಾನಸಿಕ ಹಿಂಸೆಯ ಆರೋಪಗಳು ಕೇಳಿ ಬಂದಿವೆ. ಅಲ್ಲದೆ ಭೂಷಣ್ ಸಿಂಗ್ ವಿರುದ್ಧ 7 ಮಹಿಳಾ ಕುಸ್ತಿಪಟುಗಳು ಸೆಂಟ್ರಲ್ ದೆಹಲಿಯ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ. ಪ್ರತಿಭಟನೆ ಮತ್ತು ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸುಪ್ರೀಂ ಕೋರ್ಟ್ನಲ್ಲಿ ಪ್ರತಿಭಟನಾಕಾರರ ಮನವಿಗೆ ಪ್ರತಿಕ್ರಿಯೆಯಾಗಿ, ಸಿಂಗ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354, 354 ಎ ಮತ್ತು 354 ಡಿ ಅಡಿಯಲ್ಲಿ ಕೇಸ್ ದಾಖಲಾಗಿದೆ.