ದೆಹಲಿ

ದೆಹಲಿ: 10 ಕೋಟಿ ಮಂದಿಗೆ ಕೊರೋನಾ ಬೂಸ್ಟರ್‌ ಡೋಸ್‌ ಪೂರ್ಣ!

ದೆಹಲಿ: ಕೊರೋನಾ ವಿರುದ್ಧ ಹತ್ತು ಕೋಟಿ ಜನರು ಮುನ್ನೆಚ್ಚರಿಕೆ ಡೋಸ್ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶುಕ್ರವಾರ ತಿಳಿಸಿದ್ದಾರೆ.

ಸಾರ್ವಜನಿಕ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಎಲ್ಲರಿಗೂ ಮುನ್ನೆಚ್ಚರಿಕೆಯ ಡೋಸ್‌ಗಳನ್ನು ಉಚಿತವಾಗಿ ನೀಡಲು ಸರ್ಕಾರ ಜುಲೈ 15 ರಂದು 75 ದಿನಗಳ ವಿಶೇಷ ಅಭಿಯಾನವನ್ನು ಪ್ರಾರಂಭಿಸಿತ್ತು.

ಇದೀಗ ದೇಶದಲ್ಲಿ 10 ಕೋಟಿ ಜನರು ಸುರಕ್ಷತೆಯ ಹೆಚ್ಚುವರಿ ಪದರವನ್ನ ಹೊಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಜಿ ಅವರನಾಯಕತ್ವದಲ್ಲಿ, ಎಲ್ಲಾ ವಯಸ್ಕರಿಗೆ ಉಚಿತ ಮುನ್ನೆಚ್ಚರಿಕೆ ಡೋಸ್ ಒದಗಿಸಲು ‘ಕೋವಿಡ್ ವ್ಯಾಕ್ಸಿನೇಷನ್ #AmritMahotsav’ ಭರದಿಂದ ಸಾಗುತ್ತಿದೆ ಎಂದು ಮಾಂಡವಿಯಾ ಟ್ವೀಟ್ ಮಾಡಿದ್ದಾರೆ.

ಜುಲೈ 26ರಂದು, ಆರೋಗ್ಯ ಸಚಿವಾಲಯವು ಕೇವಲ 7,30,96,284 ಜನರಿಗೆ ಮಾತ್ರ, ಅಂದರೆ 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಸುಮಾರು 69 ಕೋಟಿ ಅರ್ಹ ವ್ಯಕ್ತಿಗಳಲ್ಲಿ ಶೇಕಡಾ 11ರಷ್ಟು ಜನರಿಗೆ ಮಾತ್ರ ಮುನ್ನೆಚ್ಚರಿಕೆ ಡೋಸ್ ನೀಡಲಾಗಿದೆ ಎಂದು ಹೇಳಿತ್ತು.ಜುಲೈ 14 ರವರೆಗೆ 64,89,99,721 ಅರ್ಹ ಜನರಲ್ಲಿ ಮುನ್ನೆಚ್ಚರಿಕೆ ಡೋಸ್ ಕವರೇಜ್ ಕೇವಲ ಶೇಕಡಾ 8 ರಷ್ಟಿತ್ತು.

ಭಾರತದ ಸ್ವಾತಂತ್ರ್ಯದ 75ನೇ ವಾರ್ಷಿಕೋತ್ಸವವನ್ನ ಆಚರಿಸಲು ಸರ್ಕಾರದ ‘ಆಜಾದಿ ಕಾ ಅಮೃತ ಮಹೋತ್ಸವ’ದ ಭಾಗವಾಗಿ 75 ದಿನಗಳ ವಿಶೇಷ ಅಭಿಯಾನ ‘ಕೋವಿಡ್ ಲಸಿಕೆ ಅಮೃತ ಮಹೋತ್ಸವ’ಕ್ಕೆ ಚಾಲನೆ ನೀಡಲಾಯಿತು. ಇದೀಗ 10 ಕೋಟಿ ಜನರು ಸುರಕ್ಷತೆಯ ಹೆಚ್ಚುವರಿ ಪದರವನ್ನ ಹೊಂದಿದ್ದಾರೆ.

Sneha Gowda

Recent Posts

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

7 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

19 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

24 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

38 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago

92ನೇ ಜನ್ಮದಿನ ಆಚರಿಸಿಕೊಳ್ಳದಿರಲು ಎಚ್‌.ಡಿ. ದೇವೇಗೌಡರ ನಿರ್ಧಾರ!

ಇದೇ ತಿಂಗಳ 18 ರಂದು 92ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಈ ಬಾರಿ ಹುಟ್ಟುಹಬ್ಬ…

1 hour ago