Categories: ದೆಹಲಿ

ಮಾಲಿನ್ಯ ನಿಯಂತ್ರಣಕ್ಕೆ ಪಟಾಕಿ ನಿಷೇಧಿಸಿದ ದೆಹಲಿ ಸರ್ಕಾರ

ನವದೆಹಲಿ: ದೀಪಾವಳಿ ಮತ್ತು ದಸರಾ ಸಮೀಸುತ್ತಿರುವ ಹಿನ್ನಲೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಉತ್ಪಾದನೆ, ಸಂಗ್ರಹ ಮತ್ತು ಮಾರಾಟವನ್ನು ನಿಷೇಧಿಸಲಾಗಿದೆ. ಚಳಿಗಾಲದಲ್ಲಿ ಮಾಲಿನ್ಯದ ಪ್ರಮಾಣ ತಗ್ಗಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೆಹಲಿ ಸರ್ಕಾರದ ಪರಿಸರ ಸಚಿವ ಗೋಪಾಲ್ ರೈ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದ ದೆಹಲಿ ಸರ್ಕಾರ ಈ ಪದ್ಧತಿ ಜಾರಿ ಮಾಡುತ್ತಾ ಬರುತ್ತಿದೆ. ಈ ವಿಚಾರವಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲು ದೆಹಲಿ ಪೊಲೀಸರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು. ಈ ನಿರ್ಧಾರದಿಂದ ಕಳೆದ ಕೆಲವು ವರ್ಷಗಳಿಂದ ದೆಹಲಿಯ ಗಾಳಿಯ ಗುಣಮಟ್ಟ ಗಮನಾರ್ಹವಾಗಿ ಸುಧಾರಿಸಿದೆ ಎಂದಿದ್ದಾರೆ.

ಕಳೆದ ಆರು ವರ್ಷಗಳಲ್ಲಿ ದೆಹಲಿಯ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆಯನ್ನು ಕಂಡಿದ್ದೇವೆ. ಅದು ಇನ್ನಷ್ಟು ಸುಧಾರಿಸಬೇಕಾಗಿದೆ. ಆದ್ದರಿಂದ ನಾವು ಈ ವರ್ಷವೂ ಪಟಾಕಿಗಳನ್ನು ನಿಷೇಧಿಸಲು ನಿರ್ಧರಿಸಿದ್ದೇವೆ. ಇದಕ್ಕೆ ಪೂರಕವಾಗಿ ಅಧಿಕಾರಿಗಳಿಗೆ ಪಟಾಕಿ ಪರವಾನಗಿ ನೀಡುವುದನ್ನು ತಡೆಯುವಂತೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Gayathri SG

Recent Posts

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

8 mins ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

25 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

44 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

1 hour ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

2 hours ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago