News Karnataka Kannada
Friday, May 10 2024
ದೆಹಲಿ

ದೆಹಲಿ: ದಕ್ಷಿಣ ಭಾರತದಲ್ಲಿ ಆ.6ರವರೆಗೆ ಭಾರೀ ಮಳೆ ಮುಂದುವರಿಕೆ

Heavy rains disrupt normal life in Hubballi
Photo Credit :

ದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ ಮುಂದಿನ ಎರಡರಿಂದ ಮೂರು ದಿನಗಳವರೆಗೆ ದಕ್ಷಿಣ ಪೆನಿನ್ಸುಲರ್ ಭಾರತದಲ್ಲಿ ವಿಶೇಷವಾಗಿ ಕೇರಳ, ಕರಾವಳಿ ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿದೆ.

ದೇಶದ ಮಧ್ಯ ಭಾಗಗಳಲ್ಲಿ ಕಡಿಮೆ ಮಳೆಯ ಚಟುವಟಿಕೆಯು ಆಗಸ್ಟ್ 4 ರವರೆಗೆ ಮುಂದುವರಿಯುವ ಸಾಧ್ಯತೆಯಿದೆ ಮತ್ತು ನಂತರ ಕ್ರಮೇಣ ಹೆಚ್ಚಾಗುವ ನಿರೀಕ್ಷೆಯಿದೆ.

“ಕೇರಳ ಮತ್ತು ಮಾಹೆ ಮತ್ತು ತಮಿಳುನಾಡಿನಲ್ಲಿ ಆ. 2 ರಿಂದ 4 ರವೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆ. 3ರಿಂದ 5ರವರೆಗೆ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಮತ್ತು ಆಗಸ್ಟ್‌ 2ರಿಂದ 5ರ ವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ” ಎಂದು ಹವಾಮಾನ ಇಲಾಖೆಯು ತನ್ನ ಬುಲೆಟಿನ್‌ ನಲ್ಲಿ ತಿಳಿಸಿದೆ.

ಇದೇ ರೀತಿಯ ಹವಾಮಾನವು ತೆಲಂಗಾಣ, ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ ಮತ್ತು ಮಾಹೆಯಲ್ಲಿ ಶನಿವಾರದವರೆಗೆ ಇರುತ್ತದೆ ಎಂದು ಅಂದಾಜಿಸಲಾಗಿದ್ದು ಆಗಸ್ಟ್ 6 ರಂದು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾದ ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು