Categories: ದೆಹಲಿ

ದೆಹಲಿ| ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸುಧಾರಿಸಿದೆ, ಯಾರೂ ಆತಂಕ ಪಡಬೇಕಾಗಿಲ್ಲ: ತೇಜಸ್ವಿ ಯಾದವ್

ದೆಹಲಿ : ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸುಧಾರಿಸಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಲಾಲೂ ಪುತ್ರ ತೇಜಸ್ವಿ ಯಾದವ್ ಸ್ಪಷ್ಟಪಡಿಸಿದ್ದಾರೆ.

ಪಾಟ್ನಾ ಆಸ್ಪತ್ರೆಯಿಂದ ದೆಹಲಿ ಏಮ್ಸ್‌ಗೆ ಸ್ಥಳಾಂತರಿಸಲಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಮೊದಲಿಗಿಂತ ಉತ್ತಮವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಲಾಲೂ ಪ್ರಸಾದ್‌ ಯಾದವ್ ಮೂತ್ರಪಿಂಡ, ಹೃದಯ, ರಕ್ತದೊತ್ತಡ ಮತ್ತು ಮಧುಮೇಹ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಭಾನುವಾರ ತಮ್ಮ ನಿವಾಸದ ಮೆಟ್ಟಿಲುಗಳ ಮೇಲಿಂದ ಕೆಳಗೆ ಬಿದ್ದು ಅವರ ಬಲ ಭುಜದ ಮೂಳೆಗಳು ಮುರಿದಿವೆ. ಮೂತ್ರಪಿಂಡ ಮತ್ತು ಹೃದಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ ಎಂದು ವೈದ್ಯರು ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ. ಏಮ್ಸ್‌ಗೆ ಸೇರಿದಾಗಿನಿಂದ ಲಾಲು ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ತೇಜಸ್ವಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಐಸಿಯುನಲ್ಲಿ ಲಾಲು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಯಾವುದೇ ವದಂತಿಗಳನ್ನು ಜನರು ನಂಬಬಾರದು ಎಂದು ಮನವಿ ಮಾಡಿದ್ದಾರೆ.

Sneha Gowda

Recent Posts

ಚುನಾವಣಾ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಯೋಧನಿಂದ ಲೈಂಗಿಕ ಕಿರುಕುಳ

ಪಶ್ಚಿಮ ಬಂಗಾಳದ ಉಲುಬೇರಿಯಾ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧನನ್ನು ಲೈಂಗಿಕ ಕಿರುಕುಳ ಆರೋಪ ಬಂದ ಹಿನ್ನೆಲೆಯಲ್ಲಿ…

10 mins ago

ಮೇಯುತ್ತಿದ್ದ ಕುರಿಗಳ ಮೇಲೆ ನಾಯಿಗಳ ದಾಳಿ : ಹತ್ತು ಕುರಿಗಳು ಬಲಿ

ಜಮೀನಿನಲ್ಲಿ ಮೇಯುತ್ತಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ನಾಯಿಗಳ ಹಿಂಡು ಹತ್ತು ಕುರಿಗಳನ್ನ ಕೊಂದುಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ…

10 mins ago

ಹೆಲಿಕಾಪ್ಟರ್ ದುರಂತ : ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು

 ಇರಾನ್ ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ ಭಾನುವಾರ ಪತನಗೊಂಡಿದ್ದು, ಇಬ್ರಾಹಿಂ ರೈಸಿ ಸಜೀವದಹನವಾಗಿರುವ ಮಾಹಿತಿ ಲಭ್ಯವಾಗಿದೆ. ಭಾನುವಾರದಿಂದ ನಡೆಯುತ್ತಿದ್ದ ಗಂಟೆಗಳ ಕಾರ್ಯಾಚರಣೆ…

36 mins ago

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

52 mins ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

1 hour ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

2 hours ago