News Karnataka Kannada
Thursday, May 02 2024
ದೆಹಲಿ

ಕೇಂದ್ರ ನೌಕರರಿಗೆ ದೀಪಾವಳಿ ಉಡುಗೊರೆ: ಡಿಎ ಹೆಚ್ಚಳ, ಬೋನಸ್ ಘೋಷಣೆ

Rs 200 crore deposited in bank account of daily wage labourer
Photo Credit : Pixabay

ನವದೆಹಲಿ: ದೀಪಾವಳಿಗೂ ಮುನ್ನ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಕೇಂದ್ರ ಸಚಿವ ಸಂಪುಟವು ನೌಕರರ ತುಟ್ಟಿಭತ್ಯೆ (ಡಿಎ) ಯಲ್ಲಿ 4 ಪ್ರತಿಶತ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಭತ್ಯೆ ಹೆಚ್ಚಳದ ನಂತರ ನೌಕರರ ಡಿಎ ಶೇ 42ರಿಂದ 46ಕ್ಕೆ ಏರಿಕೆಯಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳಿಗೆ ಅನುಗುಣವಾಗಿ ಕೇಂದ್ರ ನೌಕರರ ಡಿಎ ಹೆಚ್ಚಳ ಮಾಡಲಾಗಿದೆ. ಇದರಿಂದ 48.67 ಲಕ್ಷ ಕೇಂದ್ರ ಸರ್ಕಾರಿ ನೌಕರರು ಮತ್ತು 67.95 ಲಕ್ಷ ಪಿಂಚಣಿದಾರರು ಪ್ರಯೋಜನ ಪಡೆಯಲಿದ್ದಾರೆ.

ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಹೆಚ್ಚಿದ ಡಿಎ ಜುಲೈ 1ರಿಂದ ಅನ್ವಯವಾಗಲಿದೆ. ಇದರಿಂದ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು & ಪಿಂಚಣಿದಾರರಿಗೆ ಅನುಕೂಲವಾಗಲಿದೆ. ಕೇಂದ್ರ ನೌಕರರ ಡಿಎ ಶೇ.42ರಿಂದ ಶೇ.46ಕ್ಕೆ ಏರಿಕೆಯಾಗಿದೆ. ಅಲ್ಲದೆ, 11 ಲಕ್ಷಕ್ಕೂ ಹೆಚ್ಚು ರೈಲ್ವೆ ಉದ್ಯೋಗಿಗಳಿಗೆ 78 ದಿನಗಳ ಬೋನಸ್ ನೀಡಲು ನಿರ್ಧರಿಸಲಾಗಿದೆ. ಮೂರನೇ ನಿರ್ಧಾರ ರೈತರಿಗೆ ಸಂಬಂಧಿಸಿದ್ದು. ಆರು ಬೆಳೆಗಳ ಎಂಎಸ್‌ಪಿ ಹೆಚ್ಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು