Categories: ದೆಹಲಿ

ನಾಯಿಗಳಿಗೂ ಬಂತು ಆಧಾರ್ ಕಾರ್ಡ್: ಕ್ಯೂಆರ್ ಆಧಾರಿತ ಟ್ಯಾಗ್

ದೆಹಲಿ: ನಾಯಿಗಳಿಗೂ ಆಧಾರ್ ಕಾರ್ಡ್ ಹೊಂದಿರಬೇಕು ಎಂಬ ನಿಯಮ ಜಾರಿಗೆ ಬಂದಿದ್ದು, ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆ.

ದಾರಿತಪ್ಪಿದ ನಾಯಿಗಳನ್ನು ರಕ್ಷಿಸಲು ಮತ್ತು ಅವುಗಳನ್ನು ಸ್ಥಳಾಂತರ ಮಾಡಲು ಎನ್ ಜಿಓ ಈ ಕ್ರಮಗಳನ್ನು ಜಾರಿಗೆ ತಂದಿದೆ. ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ತಮ್ಮದೇ ಆದ ಆಧಾರ್ ಕಾರ್ಡ್ ಅನ್ನು ನೀಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಮಾಹಿತಿ ಪ್ರಕಾರ ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ.

ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇಂದು ಮುಂಜಾನೆಯಿಂದ ಈ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಪ್ರಾಣಿ ಕಾರ್ಯಕರ್ತೆ ಮಾನವಿ ರೈ ಅವರು ನಾಯಿಗಳಿಗೆ ಈ ಆಧಾರ್ ಕಾರ್ಡ್ ಜೀವಸೆಲೆ ಎಂದು ತಿಳಿಸಿದ್ದಾರೆ.

ಇಂದು ಈ ಕ್ಯೂಆರ್ ಆಧಾರಿತ ಟ್ಯಾಗ್ ಗಳು ನಮ್ಮ ನಾಯಿಗಳಿಗೆ ವಿಶೇಷವಾಗಿ ಸಂಕಷ್ಟದ ಸಮಯದಲ್ಲಿ ಜೀವಸೆಲೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ನಾಯಿಗಳಿಗೆ ನೀಡಿದ ಆಧಾರ್ ಕಾರ್ಡ್ ಕ್ಯೂ ಆರ್ ಆಧಾರಿತವಾಗಿದೆ. ಇದನ್ನು Pawfriend.in ಎಂಬ ಎನ್ ಜಿಒ ಆವಿಷ್ಕಾರ ಮಾಡಿದೆ. ಕಂಪೆನಿಯ ಪ್ರಕಾರ, ಬೀದಿ ನಾಯಿಗಳ ಆರೈಕೆಗೆ ಇದು ಉತ್ತಮ ಪರಿಹಾರವಾಗಿದೆ. ಇದು ಮೈಕ್ರೋಚಿಪ್ ಗಳನ್ನು ಒಳಗೊಂಡಿದ್ದು,

ಈ ಟ್ಯಾಗ್ ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಯಾರಾದರೂ ಸ್ಕ್ಯಾನ್ ಮಾಡಿದರೆ ಆ ನಾಯಿಗಳ ಬಗ್ಗೆ ವಿವರಗಳು ಮತ್ತು ತುರ್ತು ಸಂಪರ್ಕಗಳು ಸೇರಿದಂತೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸುತ್ತದೆ. ಇದರಿಂದ ಕಳೆದುಹೋದ ನಾಯಿಗಳನ್ನು ಅವುಗಳ ಯಜಮಾನನೊಂದಿಗೆ ಸೇರಿಸಲು ಸಹಾಯ ಮಾಡುತ್ತದೆ.

 

 

Chaitra Kulal

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

10 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

28 mins ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

49 mins ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

1 hour ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

1 hour ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

1 hour ago