Categories: ದೆಹಲಿ

ಮೀಡಿಯಾ ಮುಂದೆ ಸುಮ್ಮನೆ ಕಾಮೆಂಟ್‌ ಮಾಡಬೇಡಿ: ನಾಯಕರಿಗೆ ಸೋನಿಯಾ ಎಚ್ಚರಿಕೆ

ಹೊಸದಿಲ್ಲಿ: ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಸರ್ವಾಧಿಕಾರಿ ಸರಕಾರವನ್ನು ಅಂತ್ಯಗಾಣಿಸಲು ಪ್ರತಿ ನಾಯಕರು ಪಕ್ಷದೊಳಗೆ ಐಕ್ಯತೆ ಕಾಯ್ದುಕೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಅಭಿಪ್ರಾಯಪಟ್ಟಿದೆ.

ಪಕ್ಷದ ರಾಷ್ಟ್ರೀಯ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲಾ ಹಂತದ ಎಲ್ಲಾ ನಾಯಕರು ಮತ್ತು ಕಾರ್ಯಕರ್ತರು ನಿಯಮಿತವಾಗಿ ಜನರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಇದು ನಮಗೆ ವಿಶ್ರಾಂತಿಯ ಸಮಯವಲ್ಲ, ಕಳೆದ 10 ವರ್ಷಗಳಲ್ಲಿ ಬಿಜೆಪಿಯ ಆಡಳಿತದಲ್ಲಿ, ಸಾಮಾನ್ಯ ಜನರು ಎದುರಿಸುತ್ತಿರುವ ಸವಾಲುಗಳು ದ್ವಿಗುಣಗೊಂಡಿವೆ. ಬಡವರು, ರೈತರು, ಕಾರ್ಮಿಕರು, ಮಹಿಳೆಯರು ಮತ್ತು ಯುವಕರ ಸಮಸ್ಯೆಗಳನ್ನು ಪರಿಹರಿಸಲು ಪ್ರಧಾನಿ ನಿರಾಕರಿಸುತ್ತಿದ್ದಾರೆ. ಈ ಸಂದರ್ಭ ನಾವು ಮೂಕ ಪ್ರೇಕ್ಷಕರಾಗಿ ಉಳಿಯಲು ಸಾಧ್ಯವಿಲ್ಲ. ನಮ್ಮ ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಒಗ್ಗೂಡಿ ಈ ಸರ್ವಾಧಿಕಾರಿ ಸರ್ಕಾರವನ್ನು ಕಿತ್ತೊಗೆಯಬೇಕು ಎಂದರು.

ಮಾಧ್ಯಮದ ಎದುರಿಗೆ ಕಾಂಗ್ರೆಸ್ ಹಿತಾಸಕ್ತಿಗೆ ಧಕ್ಕೆ ತರುವಂತಹ ಕಾಮೆಂಟ್‌ ಮಾಡದಂತೆ, ಈ ನಿಟ್ಟಿನಲ್ಲಿ ಸ್ವಯಂ ಸಂಯಮವನ್ನು ಕಾಪಾಡಿಕೊಳ್ಳುವಂತೆ ಸೋನಿಯಾ ಪಕ್ಷದ ನಾಯರಕನ್ನು ಕೇಳಿಕೊಂಡರು. ವೈಯಕ್ತಿಕ ಹಿತಾಸಕ್ತಿಗಳನ್ನು ಬದಿಗೊತ್ತಿ ಪಕ್ಷದ ಯಶಸ್ಸಿಗೆ ಅವಿರತವಾಗಿ ಶ್ರಮಿಸಬೇಕು. ಒಗ್ಗಟ್ಟು ಮತ್ತು ಶಿಸ್ತಿನ ಮೂಲಕವೇ ಎದುರಾಳಿಗಳನ್ನು ಸೋಲಿಸಲು ಸಾಧ್ಯ. ನಾವು ಒಗ್ಗಟ್ಟಾಗಿ ಇದ್ದ ಕಾರಣ ಕರ್ನಾಟಕದಲ್ಲಿ ಜಯ ಸಾಧ್ಯವಾಗಿದೆ. ಶಿಸ್ತಿನಿಂದ ಹೋರಾಟ ನಡೆಸಿ ದ್ವಿಗ್ವಿಜಯ ಸಾಧಿಸಲಾಗಿದೆ ಎಂದು ಸೋನಿಯಾ ಹೇಳಿದರು.

Ashika S

Recent Posts

ರಾಧಾ ರಮಣ ಧಾರವಾಹಿಯ ಜನಪ್ರಿಯ ನಟಿ ಪವಿತ್ರ ಜಯರಾಂ ನಿಧನ

ಕನ್ನಡದ ರೋಬೋ ಫ್ಯಾಮಿಲಿ, ಜೋಕಾಲಿ, ನೀಲಿ, ರಾಧಾ ರಮಣ ಧಾರಾವಾಹಿಯಲ್ಲಿ ನಟಿಸಿ ಜನಪ್ರಿಯರಾಗಿದ್ದ ನಟಿ ಪವಿತ್ರ ಜಯರಾಂ ಅವರು ನಿಧನರಾಗಿದ್ದಾರೆ.

4 mins ago

ಹಣ್ಣಕ್ಕೆ ಬೇಡಿಕೆ ಇಟ್ಟು ಮರ್ಮಾಂಗಕ್ಕೆ ವಿದ್ಯುತ್​ ಶಾಕ್​ ನೀಡಿ ಚಿತ್ರಹಿಂಸೆ

ಹಣಕ್ಕಾಗಿ ಬೇಡಿಕೆ ಇಟ್ಟು ಸೆಕೆಂಡ್ ಹ್ಯಾಂಡ್ ಕಾರು ವ್ಯಾಪಾರಿಯ ಬಟ್ಟೆ ಬಿಚ್ಚಿಸಿ, ಬೆತ್ತಲೆ ಮಾಡಿ ಘನಘೋರವಾಗಿ ಚಿತ್ರಹಿಂಸೆ ನೀಡಿರುವ ಘಟನೆ…

26 mins ago

ಮಾಜಿ ಸಿಎಂ ಎಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ: ಕಾಂಗ್ರೆಸ್​ ಶಾಸಕ

ಹೆಚ್​ಡಿ ರೇವಣ್ಣರಂತೆ ಮಾಜಿ ಸಿಎಂ ಹೆಚ್​ಡಿಕೆ ಜೈಲಿಗೆ ಹೋಗುವ ಕಾಲ ಹತ್ತಿರದಲ್ಲಿದೆ. ಅವರ ವಿರುದ್ಧವೂ ಮಹಿಳೆಯರು ದೂರು ಕೊಡುತ್ತಾರೆ. ಅವರು…

38 mins ago

ಪಾಕ್​ ಆಕ್ರಮಿತ ಕಾಶ್ಮೀರದಲ್ಲಿ ಭುಗಿಲೆದ್ದ ಘರ್ಷಣೆ

ವಿದ್ಯುತ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಪಾಕ್ ಆಕ್ರಮಿತ ಕಾಶ್ಮೀರದ ರಾಜಧಾನಿ ಮುಜಾಫರಾಬಾದ್ ನ ಹಲವು ಪ್ರದೇಶಗಳಲ್ಲಿ…

57 mins ago

ಕ್ರಿಕೆಟ್ ಪಂದ್ಯದ ವೇಳೆ 21 ವರ್ಷದ ಯುವಕನನ್ನು ಥಳಿಸಿ ಹತ್ಯೆ

ವಾಯುವ್ಯ ದೆಹಲಿಯ ಭಾರತ್ ನಗರ ಪ್ರದೇಶದಲ್ಲಿ ಕ್ರಿಕೆಟ್ ಪಂದ್ಯದ ವೇಳೆ ತನ್ನ ಸಹೋದರ ಮತ್ತು ಇತರ ಆಟಗಾರರ ನಡುವಿನ ಜಗಳದಲ್ಲಿ…

58 mins ago

ಬೀದರ್‌ನಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್‌ಗಿರಿ

ಬೀದರ್‌ನ ಬಸವಕಲ್ಯಾಣದಲ್ಲಿ ಮತ್ತೊಂದು ನೈತಿಕ ಪೊಲೀಸ್​ಗಿರಿ ನಡೆದಿದೆ. ಬಸವಕಲ್ಯಾಣದ ಹೊರವಲಯದ ಪಾರ್ಕ್‌ನಲ್ಲಿ ಹಿಂದೂ ಧರ್ಮೀಯ ವ್ಯಕ್ತಿ ಜೊತೆ ಕುಳಿತಿದ್ದಕ್ಕೆ ಮುಸ್ಲಿಂ…

1 hour ago