ನವದೆಹಲಿ: ಕರ್ನಾಟಕಕ್ಕೆ ೩,೪೫೪ ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.
ತಿಂಗಳ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಇದರ ವಿಚಾರಣೆ ನಡೆಸಿದ ನ್ಯಾಯಾಲಯ ವಿಳಂಬಕ್ಕಾಗಿ ಕೇಂದ್ರಕ್ಕೆ ಛೀಮಾರಿ ಹಾಕಿತ್ತು.
ಮುಂಗಾರು ಕೈಕೊಟ್ಟ ಪರಿಣಾಮ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ಸೃಷ್ಟಿಯಾಗಿ, ರಾಜ್ಯ ಸರ್ಕಾರ ೧೮,೧೭೨ ಕೋಟಿ ಬರ ಪರಿಹಾರಕ್ಕೆ ಬೇಡಿಕೆ ಇಟ್ಟಿತ್ತು. ತಿಂಗಳು ಕಳೆದರೂ ಪರಿಹಾರ ಬಿಡುಗಡೆಯಾಗದ ಕಾರಣ ಪ್ರಕರಣ ನ್ಯಾಯಾಲಯದ ಮೆಟ್ಟಿಲು ಏರಿತ್ತು.
ವಿಚಾರಣೆ ನಡೆಸಿದ ನ್ಯಾಯಾಲಯ ರಾಷ್ಟ್ರೀಯ ಪ್ರಾಕೃತಿಕ ವಿಕೋಪ ನಿಧಿಯಿಂದ ಹಣ ಬಿಡುಗಡೆ ಮಾಡುವಂತೆ ಆದೇಶಿಸಿತು. ಅದರಂತೆ ಕೇಂದ್ರದಿಂದ ಪರಿಹಾರ ಘೋಷಣೆಯಾಗಿದೆ.