ನವದೆಹಲಿ: ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಕೆನಡಾ, ಯುನೈಟೆಡ್ ಸ್ಟೇಟ್ಸ್, ಯುಕೆ ಮತ್ತು ಆಸ್ಟ್ರೇಲಿಯಾದಂತಹ ಮಿತ್ರ ರಾಷ್ಟ್ರಗಳಿಗೆ ಭಾರತ ಮನವಿ ಮಾಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್ ಹೇಳಿದ್ದಾರೆ. ಕೆನಡಾದಲ್ಲಿ ಖಲಿಸ್ತಾನಿ ಪೋಸ್ಟರ್ಗಳಲ್ಲಿ ಕಾಣಿಸಿಕೊಂಡಿರುವ ಭಾರತೀಯ ರಾಜತಾಂತ್ರಿಕರ ಹೆಸರುಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಇದು ನಮ್ಮ ಸಂಬಂಧಗಳ ಮೇಲೆ ಪರಿಣಾಮ ಬೀರುತ್ತದೆ.
ನಾವು ಈ ಪೋಸ್ಟರ್ ವಿಷಯವನ್ನು ಆ ದೇಶಗಳ ಸರ್ಕಾರದೊಂದಿಗೆ ಪ್ರಸ್ತಾಪಿಸಿ ಖಲಿಸ್ತಾನಿಗಳಿಗೆ ಜಾಗ ನೀಡದಂತೆ ಧ್ವನಿ ಎತ್ತುತ್ತೇವೆ ಎಂದರು. ಕೆನಡಾದಲ್ಲಿ ಸಿಖ್ ಫಾರ್ ಜಸ್ಟಿಸ್ ಬ್ಯಾನರ್ ಅಡಿಯಲ್ಲಿ ಕೆಲವು ಪೋಸ್ಟರ್ಗಳನ್ನು ಹಾಕಲಾಗಿದೆ, ಅದರಲ್ಲಿ ಕಿಲ್ ಇಂಡಿಯಾ ಎಂದು ಬರೆಯಲಾಗಿತ್ತು. ಈ ಪೋಸ್ಟರ್ನಲ್ಲಿ ಜುಲೈ 8 ರಂದು ನಿಗದಿಯಾಗಿರುವ ಖಲಿಸ್ತಾನ್ ಫ್ರೀಡಂ ರ್ಯಾಲಿಗೆ ಜನರನ್ನು ಆಹ್ವಾನಿಸಲಾಗಿದೆ. ಒಟ್ಟಾವಾದಲ್ಲಿನ ಹೈಕಮಿಷನರ್ ಮತ್ತು ಟೊರೊಂಟೊದಲ್ಲಿನ ಕಾನ್ಸುಲೇಟ್ ಜನರಲ್ನ್ನು ನೇರವಾಗಿ ಗುರುತಿಸುವ ರ್ಯಾಲಿಗಾಗಿ ಪೋಸ್ಟರ್ಗಳನ್ನು ಪ್ರಸಾರ ಮಾಡಲಾಗುತ್ತಿದೆ. ಇದು ಭಾರತ ಸರ್ಕಾರದ ಚಿಂತೆಗೆ ಕಾರಣವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.