ದೆಹಲಿ: ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಅರಣ್ಯ ಸಚಿವ ಸಾಧು ಸಿಂಗ್ ಧರಮ್ಸೋತ್ ಅವರನ್ನು ಸೋಮವಾರ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಧರಮ್ಸೋತ್ ಅವರನ್ನು ಬಂಧಿಸಲಾಗಿದೆ ಎಂದು ಇಡಿ ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಪಂಜಾಬ್ ವಿಜಿಲೆನ್ಸ್ ಬ್ಯೂರೋ ಅವರನ್ನು ಎರಡು ಬಾರಿ ಬಂಧಿಸಿತ್ತು. ಮೊದಲು ಅರಣ್ಯ ಹಗರಣದಲ್ಲಿ ವಿಜಿಲೆನ್ಸ್ನಿಂದ ಬಂಧಿಸಲ್ಪಟ್ಟು ಜೈಲಿನಲ್ಲಿ ಇದ್ದರು. ಆ ಬಳಿಕ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮತ್ತೆ ಬಂಧಿತರಾಗಿದ್ದರು.