ದೆಹಲಿ

ಪ್ರಿಯಾಂಕಾ ಗಾಂಧಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ ಇಡಿ

ನವದೆಹಲಿ: ಜಾರಿ ನಿರ್ದೇಶನಾಲಯ(ಇಡಿ) ಇದೇ ಮೊದಲ ಬಾರಿ ಭೂಮಿ ಖರೀದಿ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರು ಉಲ್ಲೇಖಿಸಿದೆ.

2006ರಲ್ಲಿ ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ ಹರಿಯಾಣದ ಫರಿದಾಬಾದ್‌ನಲ್ಲಿ ಐದು ಎಕರೆ ಕೃಷಿ ಭೂಮಿ ಖರೀದಿಸಿ, ಅದೇ ಭೂಮಿಯನ್ನು ಫೆಬ್ರವರಿ, 2010 ರಲ್ಲಿ ಅವರಿಗೆ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್ ಶೀಟ್ ನಲ್ಲಿ ಇಡಿ, ಪ್ರಿಯಾಂಕಾ ಗಾಂಧಿಯ ಹೆಸರು ಉಲ್ಲೇಖಿಸಿದೆ.

ಇಡಿ ಪ್ರಕಾರ, ಫರಿದಾಬಾದ್‌ನ ಅಮಿಪುರ್ ಗ್ರಾಮದಲ್ಲಿ ಪಹ್ವಾ ಅವರಿಂದ ಭೂಮಿಯನ್ನು ಖರೀದಿಸಲಾಗಿದೆ. ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರಿಂದ ಅಮಿಪುರ್ ಗ್ರಾಮದಲ್ಲಿ 40.08 ಎಕರೆಯ ಮೂರು ತುಂಡು ಭೂಮಿಯನ್ನು ಖರೀದಿಸಿ ಅದನ್ನು ಡಿಸೆಂಬರ್, 2010 ರಲ್ಲಿ ಅವರಿಗೇ ಮಾರಾಟ ಮಾಡಿದ್ದಾರೆ. ರಿಯಲ್ ಎಸ್ಟೇಟ್ ಏಜೆಂಟ್ ಆಗಿರುವ ಪಹ್ವಾ ಅವರು ಎನ್‌ಆರ್‌ಐ ಉದ್ಯಮಿ ಸಿಸಿ ಥಂಪಿಗೆ ಭೂಮಿಯನ್ನು ಮಾರಾಟ ಮಾಡಿದ್ದಾರೆ.

ಈ ದೊಡ್ಡ ಪ್ರಕರಣವು ಪರಾರಿಯಾಗಿರುವ ಶಸ್ತ್ರಾಸ್ತ್ರ ವ್ಯಾಪಾರಿ ಸಂಜಯ್ ಭಂಡಾರಿಯನ್ನು ಒಳಗೊಂಡಿದ್ದು, ಮನಿ ಲಾಂಡರಿಂಗ್, ವಿದೇಶಿ ವಿನಿಮಯ ಮತ್ತು ಕಪ್ಪು ಹಣದ ಕಾನೂನುಗಳ ಉಲ್ಲಂಘನೆ ಮತ್ತು ಅಧಿಕೃತ ರಹಸ್ಯ ಕಾಯಿದೆ ಅಡಿ ತನಿಖೆ ನಡೆಯುತ್ತಿದೆ. ಸಂಜಯ್ ಭಂಡಾರಿ 2016 ರಲ್ಲಿ ಭಾರತದಿಂದ ಯುಕೆಗೆ ಪಲಾಯನ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ತನ್ನ ಹಿಂದಿನ ಆರೋಪ ಪಟ್ಟಿಯಲ್ಲಿ ರಾಬರ್ಟ್ ವಾದ್ರಾ ಅವರನ್ನು ಥಂಪಿಯ ಆಪ್ತ ಸಹಾಯಕ ಎಂದು ಹೆಸರಿಸಿದೆ.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago