News Karnataka Kannada
Thursday, May 02 2024
ದೆಹಲಿ

‘ಪಂಚ’ರಾಜ್ಯಗಳ ಚುನಾವಣೆಗೆ ಶೀಘ್ರವೇ ದಿನಾಂಕ ಘೋಷಣೆ

Election dates for 'five' states to be announced soon
Photo Credit : IANS

ದೆಹಲಿ: ಛತ್ತೀಸ್‌ಗಢ ಸೇರಿದಂತೆ ಪಂಚರಾಜ್ಯಗಳ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಚುನಾವಣೆ ಆಯೋಗವು ಅಕ್ಟೋಬರ್ 8 ರಿಂದ 10ರ ಒಳಗಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ರಾಜಸ್ಥಾನ್, ಮಧ್ಯಪ್ರದೇಶ, ಛತ್ತೀಸಗಢ, ತೆಲಂಗಾಣ, ಮಿಜೋರಾಂ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು, ಮೂರ್ನಾಲ್ಕು ದಿನಗಳ ಒಳಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ.

ವರದಿಗಳ ಪ್ರಕಾರ ನವೆಂಬರ್ ಎರಡನೇ ವಾರದಲ್ಲಿ ಚುನಾವಣೆ ಪ್ರಕ್ರಿಯೆಗಳು ಶುರುವಾಗಿ ಡಿಸೆಂಬರ್ ಮೊದಲ ವಾರದ ವೇಳೆಗೆ ಮುಗಿಯುವ ನಿರೀಕ್ಷೆ ಇದೆ. ರಾಜಸ್ಥಾನ, ಮಧ್ಯಪ್ರದೇಶ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಒಂದೇ ಹಂತದಲ್ಲಿ ಚುನಾವಣೆ ನಡೆಯಬಹುದು.

2018ರಲ್ಲಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಇನ್ನು ಛತ್ತೀಸ್​​ಗಢದಲ್ಲಿ 2018ರಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆದಿತ್ತು. ಡಿಸೆಂಬರ್ 17ಕ್ಕೆ ಮಿಜೋರಾಂ ವಿಧಾನಸಭೆಯ ಅವಧಿ ಮುಕ್ತಾಯಗೊಳ್ಳಲಿದೆ. ಇನ್ನು ರಾಜಸ್ಥಾನ, ತೆಲಂಗಾಣ, ಛತ್ತೀಸಗಢದ ವಿಧಾನಸಭೆಯ ಅವಧಿ ಜನವರಿಯಲ್ಲಿ ಮುಕ್ತಾಯಗೊಳ್ಳಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು