ದೆಹಲಿ

ಕೇಂದ್ರದ ವಿರುದ್ಧ ರಸ್ತೆಗಿಳಿದ ರೈತರು; ಪರಿಹಾರ ಹೆಚ್ಚಳಕ್ಕೆ ಆಗ್ರಹ

ನವದೆಹಲಿ: ಮೂರು ವರ್ಷಗಳ ನಂತರ ದೇಶದಲ್ಲಿ ರೈತರ ಕೂಗು ಕೇಳಿಬರುತ್ತಿದ್ದು, ಭೂಮಿಯ ಪರಿಹಾರ ಹೆಚ್ಚಳಕ್ಕೆ ಬೇಡಿಕೆಯಿಟ್ಟು ಉತ್ತರ ಪ್ರದೇಶದ ನೋಯ್ಡಾದಿಂದ ಸಂಸತ್ ಭವನದ ಕಡೆಗೆ ಮೆರವಣಿಗೆ ಹೊರಟಿದ್ದಾರೆ.ಇದು ಸಂಚಾರ ದಟ್ಟಣೆಗೆ ಕಾರಣವಾಗಿದೆ.

ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್‌ ಅಳವಡಿಸಲಾಗಿದ್ದು, ನೋಯ್ಡಾ ಎಕ್ಸ್‌ಪ್ರೆಸ್‌ ವೇಗೆ ಪ್ರವೇಶಿಸುವ ಎಲ್ಲಾ ಮಾರ್ಗಗಳನ್ನೂ ಸಂಚಾರಿ ಪೊಲೀಸರು ತಡೆದಿದ್ದಾರೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾಗಿದೆ.

ನೋಯ್ಡಾದಿಂದ ಹೊರಟ ರೈತರು ದೆಹಲಿ ಪ್ರವೇಶಿಸದಂತೆ ದಿಲ್ಲಿ ಪೋಲೀಸರು ಬೃಹತ್‌ ಸಂಖ್ಯೆಯಲ್ಲಿ ಭದ್ರತಾ ಪಡೆ ಹಾಗು ಜಲ ಫಿರಂಗಿಗಳನ್ನು ನಿಯೋಜಿಸಿದ್ದಾರೆ. ಉತ್ತರ ಪ್ರದೇಶ ಹಾಗು ಹರ್ಯಾಣದ ಮತ್ತಷ್ಟು ರೈತರು ಸೇರ್ಪಡೆಗೊಳ್ಳುವ ಸಾಧ್ಯತೆಯಿರುವುರಿಂದ ಅವರನ್ನು ತಡೆಯಲು ಸೂಕ್ತ ತಯಾರಿ ಮಾಡಲಾಗುತ್ತಿದೆ.

ನೋಯ್ಡಾ ಮತ್ತು ಗ್ರೇಟರ್ ನೋಯ್ಡಾದಲ್ಲಿ ಮೂಲಸೌಕರ್ಯ ಹಾಗೂ ಇತರೆ ಅಭಿವೃದ್ಧಿ ಯೋಜನೆಗಳಿಗಾಗಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ಹೆಚ್ಚುವರಿ ಪರಿಹಾರ ನೀಡುವಂತೆ ಆಗ್ರಹಿಸಿರುವ ರೈತರು, ಶೇ 10ರಷ್ಟು ಅಬಾದಿ ಜಮೀನು ನೀಡಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.

ಜಮೀನು ಸ್ವಾಧೀನಪಡಿಸಿಕೊಂಡ ಕಾರಣ ಬಹುತೇಕರು ಭೂರಹಿತರಾಗಿದ್ದಾರೆ. ಅವರಿಗೆ ತಕ್ಕ ಪರಿಹಾರ ಸಿಗಬೇಕು. ಜೊತೆಗೆ, ಸ್ವಾಧೀನಪಡಿಸಿಕೊಂಡಾಗ ಜಮೀನಿಗೆ ಇದ್ದ ದರವನ್ನೇ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Maithri S

Recent Posts

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

13 mins ago

ಮಳೆಯಿಂದಾಗಿ ಪಂದ್ಯ ರದ್ದು; ಪ್ಲೇಆಫ್​ಗೇರಿದ್ದು ಯಾರು ?

ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್‌ನಲ್ಲಿ ಸನ್‌ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್‌ಗೂ ಮುನ್ನವೇ…

23 mins ago

ಗುಡ್‌ ನ್ಯೂಸ್:‌ ಶುಗರ್‌, ಹೃದ್ರೋಗ ಸೇರಿ 41 ಔಷಧಿಗಳ ಬೆಲೆ ಕಡಿತ

ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್‌ಗಳ…

36 mins ago

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

11 hours ago