ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಮತದಾನ ಮಾಡಲು 96 ಕೋಟಿ ಮತದಾರರು ಅರ್ಹರಾಗಿದ್ದಾರೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ದೇಶದಲ್ಲಿ ಮತದಾರರ ಸಂಖ್ಯೆ 91 ಕೋಟಿಯಷ್ಟಿತ್ತು. ಕಳೆದ ಬಾರಿಯ ಚುನಾವಣೆಗೆ ಹೋಲಿಸಿದರೆ ಮತದಾರರ ಸಂಖ್ಯೆಯು ಐದು ಕೋಟಿಯಷ್ಟು ಹೆಚ್ಚಳವಾಗಿದೆ.
ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದೇಶದಾದ್ಯಂತ ಸುಮಾರು 12 ಲಕ್ಷ ಮತದಾನ ಕೇಂದ್ರಗಳನ್ನು ಸ್ಥಾಪಿಸಲಿದೆ.
ಚುನಾವಣಾ ಅಯೋಗ ಗುರುವಾರ ನವದೆಹಲಿಯಲ್ಲಿ ‘14ನೇ ರಾಷ್ಟ್ರೀಯ ಮತದಾರರ ದಿನ’ ಆಚರಿಸಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ‘ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆಯ ವಿಸ್ತಾರ ಮತ್ತು ವೈವಿಧ್ಯತೆಯು ಹೆಮ್ಮೆಯ ವಿಷಯವಾಗಿದೆ’ ಎಂದು ಹೇಳಿದರು. 2024ರ ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟಿಸಲು ಆಯೋಗವು ಯೋಜಿಸುತ್ತಿದೆ.