ನವದೆಹಲಿ, ಫೆ.26: ರಾಷ್ಟ್ರ ರಾಜಧಾನಿ ದೆಹಲಿಯ ಗಾಲ್ಫ್ ಕ್ಲಬ್ ಕಚೇರಿಯಲ್ಲಿ ಭಾನುವಾರ ಬೆಂಕಿ ಅವಘಡ ಸಂಭವಿಸಿದೆ. ಸುಮಾರು 35 ನಿಮಿಷಗಳ ಕಾಲ ಬೆಂಕಿ ಹರಡಿದ್ದು, ಯಾವುದೇ ವ್ಯಕ್ತಿಗೆ ಹಾನಿಯಾಗಿಲ್ಲ. ಘಟನೆಯಲ್ಲಿ ಕಚೇರಿಯ ಪೀಠೋಪಕರಣಗಳು ಸುಟ್ಟುಹೋಗಿವೆ.
ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಳಿಗ್ಗೆ 10.26 ಕ್ಕೆ ಬೆಂಕಿಯ ಬಗ್ಗೆ ಕರೆ ಬಂದಿತು, ನಂತರ ನಾಲ್ಕು ಅಗ್ನಿಶಾಮಕ ದಳಗಳನ್ನು ಸ್ಥಳಕ್ಕೆ ರವಾನಿಸಲಾಯಿತು.
ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಳಿಗ್ಗೆ 11 ಗಂಟೆಯ ವೇಳೆಗೆ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಬೆಂಕಿ ಅನಾಹುತಕ್ಕೆ ಕಾರಣ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಇದಕ್ಕೆ ಕಾರಣವಾಗಿರಬಹುದು” ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅವರಿಗೆ ಸಹಾಯ ಮಾಡಲು ಸ್ಥಳೀಯ ಪೊಲೀಸ್ ಠಾಣೆಯ ತಂಡವೂ ಸ್ಥಳಕ್ಕೆ ತಲುಪಿದೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ದಾರೆ.