News Karnataka Kannada
Thursday, April 25 2024
ದೆಹಲಿ

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ: 11 ಮಂದಿ ಸಾವು

ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯ ಬಳಿ ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. 
Photo Credit : News Kannada

ದೆಹಲಿ: ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯ ಬಳಿ ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಘಟನೆಯಲ್ಲಿ ನಾಲ್ಕು ಮಂದಿ ಗಾಯಗೊಂಡಿದ್ದಾರೆ. ಬೆಂಕಿ ಕೆನ್ನಾಲಿಗೆಗೆ ಹತ್ತಿರದ ಕೆಲವು ಮನೆಗಳು, ಅಂಗಡಿಗಳು ಬೆಂಕಿಗೆ ಆಹುತಿಯಾಗಿವೆ.

ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಂಜೆ 5 ಗಂಟೆಯ ಸುಮಾರಿಗೆ ಬೆಂಕಿ ಬಿದ್ದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದು, ಅದರಲ್ಲಿ ಒಬ್ಬರು ಪೊಲೀಸ್​​ ಸಿಬ್ಬಂದಿ ಎಂದು ಗುರುತಿಸಲಾಗಿದೆ. ಮೃತ ದೇಹವನ್ನ ಬಾಬು ಜಗಜೀವನ್ ರಾಮ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ನಾಲ್ವರು ಗಾಯಾಳುಗಳನ್ನು ರಾಜಾ ಹರೀಶ್ ಚಂದ್ರ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಇನ್ನು ಈ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು