News Karnataka Kannada
Monday, April 29 2024
ದೆಹಲಿ

ಭಾರತೀಯ ವಿದ್ಯಾರ್ಥಿಗಳಿಗೆ ಫ್ರಾನ್ಸ್‌ ನಲ್ಲಿ ಐದು ವರ್ಷದ ಅಧ್ಯಯನ ವೀಸಾ

Five-year study visa for Indian students in France
Photo Credit : IANS

ನವದೆಹಲಿ: ಫ್ರಾನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಐದು ವರ್ಷಗಳ ದೀರ್ಘಾವಧಿಯ ಅಧ್ಯಯನ ವೀಸಾವನ್ನು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರ ಆಹ್ವಾನದ ಮೇರೆಗೆ ಫ್ರಾನ್ಸ್‌ಗೆ ಅಧಿಕೃತ ಭೇಟಿ ನೀಡಿರುವ ಮೋದಿ, ಗುರುವಾರ ಪ್ಯಾರಿಸ್‌ನ ಎಲ್‌ ಎ ಸೀನ್ ಮ್ಯೂಸಿಕೇಲ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಈ ಘೋಷಣೆ ಮಾಡಿದರು.

“ಕಳೆದ ಬಾರಿ ನಾನು ಫ್ರಾನ್ಸ್‌ಗೆ ಬಂದಾಗ, ಫ್ರಾನ್ಸ್‌ನಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪೋಸ್ಟ್-ಸ್ಟಡಿ ವರ್ಕ್ ವೀಸಾವನ್ನು ನೀಡಲು ನಿರ್ಧರಿಸಲಾಗಿತ್ತು. ಈಗ, ಫ್ರಾನ್ಸ್‌ನಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿರುವ ಭಾರತೀಯ ವಿದ್ಯಾರ್ಥಿಗಳಿಗೆ ದೀರ್ಘಾವಧಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ತಮ್ಮ ಭಾಷಣದಲ್ಲಿ ಪ್ರಧಾನಮಂತ್ರಿಯವರು ಭಾರತ-ಫ್ರಾನ್ಸ್ ಪಾಲುದಾರಿಕೆಗೆ ಬಲವಾದ ಅಡಿಪಾಯ ರೂಪಿಸುವ ಫ್ರಾನ್ಸ್‌ನಲ್ಲಿರುವ ಭಾರತೀಯ ಸಮುದಾಯದ ಕೊಡುಗೆಯನ್ನು ಎತ್ತಿ ಹಿಡಿದರು.

ಭಾರತದ ಸುಮಾರು 65,000 ವಲಸಿಗರು ಪ್ರಸ್ತುತ ಫ್ರಾನ್ಸ್‌ನಲ್ಲಿ ನೆಲೆಸಿದ್ದಾರೆ. ಫ್ರೆಂಚ್ ರಾಯಭಾರ ಕಚೇರಿಯ ಅಂಕಿಅಂಶಗಳ ಪ್ರಕಾರ, ಸುಮಾರು 2.7 ಮಿಲಿಯನ್ ವಿದ್ಯಾರ್ಥಿಗಳು ಫ್ರಾನ್ಸ್‌ ನಲ್ಲಿ ಉನ್ನತ ಶಿಕ್ಷಣಕ್ಕೆ ದಾಖಲಾಗುತ್ತಾರೆ. ಅವರಲ್ಲಿ ಶೇಕಡಾ 14 ರಷ್ಟು ವಿದೇಶಿ ವಿದ್ಯಾರ್ಥಿಗಳು ಎಂಬುದು ದಾಖಲೆಗಳಿಂದ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು