ದೆಹಲಿ

ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರದಾನ

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಭಾನುವಾರ ಅವರ ನಿವಾಸದಲ್ಲಿ ಪ್ರದಾನ ಮಾಡಿದರು.

ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಖರ್ , ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಮತ್ತು ಅಡ್ವಾಣಿ ಅವರ ಕುಟುಂಬ ಸದಸ್ಯರು ಉಪಸ್ಥಿತರಿದ್ದರು ಎಂದು ರಾಷ್ಟ್ರಪತಿ ಭವನವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ರಾಷ್ಟ್ರಪತಿಗಳು ಹಿರಿಯ ನಾಯಕರಿಗೆ ಭಾರತ ರತ್ನ ನೀಡಿ ಗೌರವಿಸುತ್ತಿದ್ದಂತೆ ಪ್ರಧಾನಿ ಮೋದಿ ಅವರು ಅಡ್ವಾಣಿ ಅವರ ಪಕ್ಕದಲ್ಲಿ ಕುಳಿತಿರುವುದನ್ನು ಫೋಟೊದಲ್ಲಿ ಕಾಣಬಹುದು.

“ಭಾರತದ ಸಾಂಸ್ಕೃತಿಕ ಪುನರುತ್ಥಾನಕ್ಕಾಗಿ ಅವರ ಸುದೀರ್ಘ ಮತ್ತು ದಣಿವರಿಯದ ಹೋರಾಟವು 2024 ರಲ್ಲಿ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರದ ಪುನರ್ನಿರ್ಮಾಣಕ್ಕೆ ಕಾರಣವಾಯಿತು”. ಸ್ವಾತಂತ್ರ್ಯಾನಂತರದ ಬೆರಳೆಣಿಕೆಯಷ್ಟು ರಾಜಕೀಯ ನಾಯಕರಲ್ಲಿ ರಾಷ್ಟ್ರೀಯ ಕಾರ್ಯಸೂಚಿಯನ್ನು ಮರುರೂಪಿಸುವಲ್ಲಿ ಮತ್ತು ಅದನ್ನು ಅಭಿವೃದ್ಧಿಯ ಪಥದಲ್ಲಿ ಇರಿಸುವಲ್ಲಿ ಅವರು ಯಶಸ್ವಿಯಾದರು. ಅಡ್ವಾಣಿಯವರ ಸಾಧನೆಗಳು ಭಾರತದ ಪ್ರತಿಭೆ ಮತ್ತು ಅದರ ಅಂತರ್ಗತ ಸಂಪ್ರದಾಯಗಳ ಅತ್ಯುತ್ತಮ ಅಭಿವ್ಯಕ್ತಿಯನ್ನು ಒದಗಿಸುತ್ತವೆ ಎಂದು ರಾಷ್ಟ್ರಪತಿ ಭವನ ಫೋಟೊಗಳೊಂದಿಗೆ ಸರಣಿ ಟ್ವೀಟ್ ಮಾಡಿದೆ.

Ashika S

Recent Posts

ಹೂಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

2 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

11 mins ago

ಶ್ರೀರಾಮ ಸೇನೆ ರಾಜ್ಯಾಧ್ಯಕ್ಷರ ಮೇಲೆ ಜಾತಿ ನಿಂದನೆ ಪ್ರಕರಣ ದಾಖಲು

ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…

15 mins ago

ಮಡಿಕೇರಿಯಲ್ಲಿ ಬುದ್ಧಿಮಾಂದ್ಯ ಹುಡುಗನ ರಕ್ಷಣೆ; ಸಂಬಂಧಪಟ್ಟವರು ಸಂಪರ್ಕಿಸುವಂತೆ ಮನವಿ

ಅನಾಥ ಬುದ್ಧಿಮಾಂದ್ಯ ಹುಡುಗನನ್ನು ರಕ್ಷಣೆ ಮಾಡಿ ಶಕ್ತಿ ಅನಾಥಾಶ್ರಮಕ್ಕೆ ಸೇರಿಸಿರುವ ಘಟನೆಯೊಂದು ಮಡಿಕೇರಿಯಲ್ಲಿ ನಡೆದಿದೆ.

20 mins ago

ಗ್ರಾಹಕರಂತೆ ಬಂದು ಬಂಗಾರದ ಬಳೆ ಎಗರಿಸಿದ ಖತರ್ನಾಕ್ ಕಳ್ಳಿಯರ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ಗ್ರಾಹಕರ ಸೋಗಿನಲ್ಲಿ ಬಂದು ಬಂಗಾರದ ಖಡ್ಗ ಕದ್ದು ಪರಾರಿಯಾದ ಘಟನೆ ಕಲಬುರಗಿ ನಗರದ ಅನ್ನಪೂರ್ಣ ಕ್ರಾಸ್‌ನಲ್ಲಿರುವ ತನಿಷ್ಕ ಜ್ಯುವೆಲ್ಲರಿ ಶಾಪ್‌ನಲ್ಲಿ…

23 mins ago

ವಿಧಾನಸೌಧ ಪ್ರವೇಶಕ್ಕೆ ಇನ್ನು ಮುಂದೆ ಕ್ಯೂಆರ್ ಕೋಡ್ ಪಾಸ್‌: ಪರಮೇಶ್ವರ್‌

ಇನ್ನು ಮುಂದೆ ವಿಧಾನಸೌಧ ಪ್ರವೇಶಕ್ಕೆ ಬೇಕಾಬಿಟ್ಟಿ ಪಾಸ್‌ಗಳನ್ನು ವಿತರಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಾರೆ.

41 mins ago