News Karnataka Kannada
Wednesday, May 01 2024
ದೆಹಲಿ

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಆಯ್ಕೆ

Dharwad IIIT will specially contribute to growth of India: President Murmu
Photo Credit :

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಅಧಿಕೃತವಾಗಿ ತನ್ನ ಅಭ್ಯರ್ಥಿ ಘೋಷಣೆ ಮಾಡಿದ್ದು, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಇದೇ ಮೊದಲ ಬಾರಿಗೆ ಬುಡಕಟ್ಟು ಸಮುದಾಯದ ಮಹಿಳೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರ ಹೆಸರನ್ನು ಘೋಷಿಸುತ್ತಿರುವುದಾಗಿ ನಡ್ಡಾ ಹೇಳಿದರು. ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿ ಆಯ್ಕೆ ದೃಷ್ಟಿಯಿಂದ ಸಂಜೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಸದೀಯ ಮಂಡಳಿ ಸಭೆ ನಡೆಯಿತು. ಸಭೆ ಬಳಿಕ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ಧಾರವನ್ನು ಪ್ರಕಟಿಸಿದರು.

ವಿಪಕ್ಷಗಳು ತಮ್ಮ ಒಮ್ಮತದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರ ಹೆಸರನ್ನು ಘೋಷಿಸಿದ್ದು, ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು