News Karnataka Kannada
Sunday, May 05 2024
ದೆಹಲಿ

ಗಣರಾಜ್ಯೋತ್ಸವಕ್ಕೆ ಅತಿಥಿಯಾಗಿ ಬರಲಿದ್ದಾರೆ ಫ್ರಾನ್ಸ್‌ ಅಧ್ಯಕ್ಷ

ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.
Photo Credit : News Kannada

ನವದೆಹಲಿ: ಈ ಬಾರಿಯ ಗಣರಾಜ್ಯೋತ್ವವ ಕಾರ್ಯಕ್ರಮಕ್ಕೆ ಭಾರತದ ಮುಖ್ಯ ಅತಿಥಿಯಾಗಿ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯಲ್ ಮ್ಯಾಕ್ರನ್ ರನ್ನು ಆಹ್ವಾನಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಆಗಮಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಮೊದಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರನ್ನು ಗಣ ರಾಜ್ಯೋತ್ಸವದ ಮುಖ್ಯ ಅತಿಥಿಯಾಗುವಂತೆ ಆಹ್ವಾನ ನೀಡಲಾಗಿತ್ತು. ಆದರೆ, ಅವರು ಜನವರಿಯಲ್ಲಿ ಭಾರತಕ್ಕೆ ಪ್ರಯಾಣಿಸಲು ಸಾಧ್ಯವಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ ನಂತರ ಫ್ರಾನ್ಸ್ ಅಧ್ಯಕ್ಷರಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರನ್ನು ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅವರೇ ಈ ಬಾರಿ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು