News Karnataka Kannada
Wednesday, May 15 2024
ದೆಹಲಿ

ಜಿ-20 ಶೃಂಗಸಭೆ: ಚೀನಾ ನಿಯೋಗದ ವಿರುದ್ಧ ಟಿಬೆಟಿಯನ್ನರ ಪ್ರತಿಭಟನೆ

G-20 summit: Tibetans protest against Chinese delegation
Photo Credit : News Kannada

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಚೀನಾದ ನಿಯೋಗದ ವಿರುದ್ಧ ಟಿಬೆಟಿಯನ್ನರು ಪ್ರತಿಭಟನೆ ನಡೆಸಿದರು.

ಉತ್ತರ ದಿಲ್ಲಿಯ ಮಜ್ನು ಕಾ ತಿಲಾದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಚೀನಾ ಸರ್ಕಾರದ ವಿರುದ್ಧ ಬ್ಯಾನರ್ ಹಿಡಿದು, ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ನಂತರ ಅಲ್ಲಿಗೆ ಆಗಮಿಸಿದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು. ಪ್ರತಿಭಟನೆ ಶಾಂತಿಯುತವಾಗಿತ್ತು ಎಂದು ಪೊಲೀಸರು ತಿಳಿಸಿದರು.

ಟಿಬೆಟ್‌ನಲ್ಲಿ ಚೀನಾದ ಕಾನೂನುಬಾಹಿರ ಆಕ್ರಮಣದ ವಿರುದ್ಧ ಟಿಬೆಟ್ ಯುವ ಕಾಂಗ್ರೆಸ್ ಅಧ್ಯಕ್ಷ ಗೊನ್ಪೊ ಧುಂಡಪ್ ಗುರುವಾರ ಪ್ರತಿಭಟನೆ ಘೋಷಿಸಿದ್ದರು. ಟಿಬೆಟ್‌ನಲ್ಲಿನ ಕಠಿಣ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿ, ಶುಕ್ರವಾರ ಚೀನಾ ನಿಯೋಗ ಬಂದಾಗ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದರು. ಹೀಗಾಗಿ ಖಾಕಿ ಪಡೆ ಮೊದಲೇ ಎಚ್ಚೆತ್ತುಕೊಂಡು ಸರ್ಪಗಾವಲು ಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು