News Karnataka Kannada
Sunday, May 19 2024
ದೆಹಲಿ

ಜಿ.20 ಶೃಂಗ ಸಭೆ ಆಹ್ವಾನ ಪತ್ರಿಕೆಯಲ್ಲಿ ಇಂಡಿಯಾ ಬದಲಿಗೆ ಭಾರತ ಪದ ಬಳಕೆ

G20 summit invitation card uses 'India' instead of 'India'
Photo Credit : News Kannada

ನವದೆಹಲಿ: G20 ಶೃಂಗಸಭೆಯಲ್ಲಿ ಭಾಗವಹಿಸುವ ರಾಷ್ಟ್ರಗಳ ಮುಖ್ಯಸ್ಥರಿಗೆ ರಾಷ್ಟ್ರಪತಿ ಕಚೇರಿಯಿಂದ ನೀಡಿದ ಅಧಿಕೃತ ಆಹ್ವಾನದಲ್ಲಿ ಇಂಡಿಯಾ ಪದದ ಬದಲಿಗೆ ಭಾರತದ ಅಧ್ಯಕ್ಷ ಪದವನ್ನು ಬಳಸಲಾಗಿದೆ. ಇದು ರಾಷ್ಟ್ರಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್ 9 ರಂದು ಔತಣಕೂಟಕ್ಕೆ G20 ವಿದೇಶಿ ನಾಯಕರು ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಆಹ್ವಾನ ನೀಡಿದ್ದಾರೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ಇಂಡಿಯಾ ಬದಲಿಗೆ ಭಾರತದ ಅಧ್ಯಕ್ಷರು ಎಂಬ ಪದಬಳಕೆ ಮಾಡಲಾಗಿದೆ.

ಈ ಬಗ್ಗೆ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಹಾಗಾದ್ರೆ ಈ ಸುದ್ದಿ ನಿಜಕ್ಕೂ ನಿಜ. ರಾಷ್ಟ್ರಪತಿ ಭವನವು ಸೆ.9 ರಂದು ಜಿ20 ಔತಣಕೂಟಕ್ಕೆ ಹಲವು ನಾಯಕರು, ವಿವಿಧ ರಾಷ್ಟ್ರಗಳಿಗೆ ಆಹ್ವಾನ ನೀಡಿದೆ. ಅದರಲ್ಲಿ ಇಂಡಿಯಾ ಅಧ್ಯಕ್ಷ ಬದಲಿಗೆ ಭಾರತದ ಅಧ್ಯಕ್ಷ ಎಂಬ ಹೆಸರಿನಲ್ಲಿ ಆಹ್ವಾನವನ್ನು ಕಳುಹಿಸಿದೆ” ಎಂದು ಹೇಳಿದ್ದಾರೆ.

ಸಂವಿಧಾನದ 1 ನೇ ವಿಧಿಯು ಹೀಗೆ ಹೇಳಿದೆ. ‘ಇಂಡಿಯಾ ಅದು ಭಾರತ, ರಾಜ್ಯಗಳ ಒಕ್ಕೂಟವಾಗಿರುತ್ತದೆ’. ಆದರೆ ಈಗ ಈ “ರಾಜ್ಯಗಳ ಒಕ್ಕೂಟ” ಕೂಡ ಆಕ್ರಮಣಕ್ಕೆ ಒಳಗಾಗಿದೆ” ಎಂದು ಅವರು ಆರೋಪಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು