News Karnataka Kannada
Saturday, May 04 2024
ದೆಹಲಿ

70 ಲಕ್ಷ ಮೊಬೈಲ್‌ ನಂಬರ್‌ ಅಮಾನತು ಮಾಡಿದ ಕೇಂದ್ರ ಸರ್ಕಾರ

Govt suspends 70 lakh mobile numbers
Photo Credit : News Kannada

ನವದೆಹಲಿ: ಭಾರತದಲ್ಲಿ ದಿನದಿಂದ ದಿನಕ್ಕೆ ಡಿಜಿಟಲ್‌ ವಂಚನಗೆಗಳು ಹೆಚ್ಚುತ್ತಿವೆ. ಒಟಿಪಿ, ಎಇಪಿಎಸ್ ಸೇರಿದಂತೆ ಹಲವು ರೀತಿಯ ವಂಚನೆಗಳು ಕುರಿತು ಪ್ರತಿನಿತ್ಯ ಸೈಬರ್‌ ಠಾಣೆಯಲ್ಲಿ ಸಾವಿರಾರು ಪ್ರಕರಣಗಳು ದಾಖಲಾಗುತ್ತವೆ.

ಕುತಂತ್ರಿ ಚೀನಾ ದೇಶದ ಪ್ರಜೆಗಳು ಭಾರತೀಯರೊಂದಿಗೆ ಸೇರಿ ಒಟಿಪಿ ವಂಚನೆ ಅಕ್ರಮ ತೊಡಗಿಸಿಕೊಂಡಿರುವ ಹಲವು ಪ್ರಕರಣಗಳು ನಡೆದಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಒಟಿಪಿ ವಂಚನೆ ತಡೆಗೆ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸ್ಥಗಿತಗೊಳಿಸಿದೆ.

ಅನುಮಾನಾಸ್ಪದ ವಹಿವಾಟಿಗೆ ಸಂಬಂಧಿಸಿ, ಡಿಜಿಟಲ್ ವಂಚನೆಗಳನ್ನು ಪರಿಶೀಲಿಸಲು, ಸೈಬರ್ ಅಪರಾಧ ಅಥವಾ ಹಣಕಾಸು ವಂಚನೆಗಳಲ್ಲಿ ತೊಡಗಿರುವ 70 ಲಕ್ಷ ಮೊಬೈಲ್ ಸಂಖ್ಯೆಗಳನ್ನು ಸರ್ಕಾರ ಕಡಿತಗೊಳಿಸಿದೆ ಎಂದು ಹಣಕಾಸು ಸೇವೆಗಳ ಕಾರ್ಯದರ್ಶಿ ವಿವೇಕ್ ಜೋಶಿ ಮಂಗಳವಾರ ಹೇಳಿದ್ದಾರೆ.

ಅಂತರ್ಜಾಲ ಯುಗದಲ್ಲಿ ಡಿಜಿಟಲ್ ಪಾವತಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ವಂಚನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಆಧಾರ್ ಎನೇಬಲ್ಡ್ ಪೇಮೆಂಟ್ ಸಿಸ್ಟಮ್ (ಎಇಪಿಎಸ್) ವಂಚನೆಗೆ ಸಂಬಂಧಿಸಿದಂತೆ, ರಾಜ್ಯಗಳು ಗಮನ ಹರಿಸಬೇಕಾಗಿದೆ ಇದರೊಂದಿಗೆ ರಾಜ್ಯ ಸರ್ಕಾರಗಳು ಡೇಟಾ ಭದ್ರತೆಯನ್ನು ಬಲಪಡಿಸುವತ್ತ ಗಮನಹರಿಸಬೇಕು ಎಂದು ಇದೇ ವೇಳೆ ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು