News Karnataka Kannada
Monday, April 29 2024
ದೆಹಲಿ

8 ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಕರ್ನಾಟಕಕ್ಕೆ ೨೦೨೪ರ ಮೊದಲ ಮಳೆಯು ಮಾರ್ಚ್ ತಿಂಗಳಲ್ಲೇ ಸುರಿದಿದೆ. ರಾಜ್ಯದ ಘಟ್ಟ ಪ್ರದೇಶಗಳಾದ ಹಾಗೂ ಹಲವು ನದಿಗಳ ಉಗಮ ಸ್ಥಾನಗಳೂ ಆಗಿರುವ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಬೇಸಿಗೆ ಆರಂಭಕ್ಕೂ ಮುನ್ನವೇ ಮಳೆಯಾಗಿದೆ. ಇದರಿಂದ ಕಾದು ಕೆಂಡದಂತಾಗುತ್ತಿದ್ದ ಭೂಮಿ ತಂಪಾಗಿದ್ದು, ಕೆಲವು ಹಳ್ಳ ಕೊಳ್ಳಗಳು ಕೂಡ ತುಂಬಿ ಹರಿದಿವೆ.
Photo Credit : Pixabay

ನವದೆಹಲಿ: ದೇಶದ ಕೆಲ ರಾಜ್ಯಗಳನ್ನು ಹೊರತುಪಡಿಸಿ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಮಳೆ ಕೊರತೆ ಕಾಡುತ್ತಿದೆ. ಭೀಕರ ಬರದ ಸ್ಥಿತಿಯೂ ಎದುರಾಗಿದೆ. ಈಗ ಮತ್ತೆ ಹಲವು ರಾಜ್ಯಗಳಲ್ಲಿ ಅಲ್ಪಸ್ವಲ್ಪ ಮಳೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆ ಹಲವು ರಾಜ್ಯಗಳಿಗೆ ಮಳೆ ಎಚ್ಚರಿಕೆ ನೀಡಿದೆ. ಕರ್ನಾಟಕ, ಮಹಾರಾಷ್ಟ್ರ, ಮಧ್ಯಪ್ರದೇಶ, ಕೇರಳ, ಸೇರಿದಂತೆ 8 ರಾಜ್ಯಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸೆ. 15ರಿಂದ 18ರವರೆಗೆ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರಿ ಮಳೆಯಾಗಲಿದ್ದು, ಸೆ.17ರಂದು ಅಂಡಮಾನ್‌ ನಿಕೋಬಾರ್‌ ದ್ವೀಪ ಸಮೂಹಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಕೇರಳದಲ್ಲಿ ಶನಿವಾರ ವಿಪರೀತ ಮಳೆಯಾಗಬಹುದು. ಕರ್ನಾಟಕದಲ್ಲಿ ಅದೇ ಸ್ಥಿತಿ ಇರಲಿದೆ ಎಂದು ಇಲಾಖೆ ಹೇಳಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು