ನವದೆಹಲಿ, ನ 13: ನವೆಂಬರ್ 18 ರ ವರೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಹಂಚಿಕೊಂಡಿದೆ. ತಮಿಳುನಾಡು ಸೇರಿದಂತೆ ಇತರ ನಾಲ್ಕು ರಾಜ್ಯಗಳಲ್ಲಿ ಗುಡುಗು ಸಹಿತ ಅಥವಾ ಸಾಧಾರಣ ಮಳೆ ಬೀಳಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ನವೆಂಬರ್ 12 ಮತ್ತು ನವೆಂಬರ್ 18 ರ ನಡುವೆ ತಮಿಳುನಾಡಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ಇದೆ. ಹೆಚ್ಚುವರಿಯಾಗಿ, ನವೆಂಬರ್ 14 ಮತ್ತು 15 ರಂದು ರಾಜ್ಯದಲ್ಲಿ ಗುಡುಗು ಸಹಿತ ಮಳೆ ಸುರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ.