News Karnataka Kannada
Tuesday, April 30 2024
ದೆಹಲಿ

ಉತ್ತರ ಭಾರತದ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಇಂದು ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Photo Credit : News Kannada

ನವದೆಹಲಿ: ಉತ್ತರ ಭಾರತದ ಹಲವೆಡೆ  ಜಮ್ಮು ಮತ್ತು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶದಲ್ಲಿ, ಹಿಮಪಾತದ ಜತೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತ ಮತ್ತು ಬಯಲು ಸೀಮೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮುಂದಿನ ಮೂರು ದಿನಗಳ ಕಾಲ ಇದು ಮುಂದುವರೆಯುವ ಸಾಧ್ಯತೆಯಿದೆ.

ಫೆಬ್ರವರಿ 21 ರವರೆಗೆ ಜಮ್ಮು-ಕಾಶ್ಮೀರ, ಲಡಾಖ್ ಮತ್ತು ಹಿಮಾಚಲ ಪ್ರದೇಶದಲ್ಲಿಭಾರೀ ಮಳೆ, ಹಿಮಪಾತ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನು ಸೂಚಿಸಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಎತ್ತರದ ಪ್ರದೇಶಗಳಲ್ಲಿ ಹಿಮ ಬೀಳುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ವಾಯುವ್ಯ ಮತ್ತು ಈಶಾನ್ಯ ರಾಜಸ್ಥಾನ ಮತ್ತು ವಾಯವ್ಯ ಮಧ್ಯಪ್ರದೇಶದಲ್ಲಿ ಕೆಲವೆಡೆ ಲಘು ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.

ಶ್ರೀನಗರ-ಲೇಹ್ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಮುಚ್ಚಲಾಗಿದೆ. ಬಾರ್ಡರ್ ರೋಡ್ಸ್ ಆರ್ಗನೈಸೇಶನ್ ರಸ್ತೆಯಿಂದ ಹಿಮವನ್ನು ತೆಗೆದುಹಾಕುವಲ್ಲಿ ನಿರತವಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು