Categories: ದೆಹಲಿ

ಎಲೆಕ್ಷನ್ ಮುಗಿದ ಬಳಿಕ ದರ ಹೆಚ್ಚಿಸಲಿರುವ ಟೆಲಿಕಾಂ ಕಂಪನಿಗಳು

ನವದೆಹಲಿ: ಬ್ಯಾಂಕ್ ಆಫ್ ಅಮೆರಿಕಾ ಸೆಕ್ಯೂರಿಟೀಸ್  ಪ್ರಕಾರ ಲೋಕಸಭಾ ಚುನಾವಣೆ ಮುಗಿದ ಬಳಿಕ ಟೆಲಿಕಾಂ ಕಂಪನಿಗಳು ವಿವಿಧ ಸೇವೆಗಳ ದರವನ್ನು ಶೇ. 20ರಷ್ಟು ಹೆಚ್ಚಿಸಬಹುದು ಎಂದು ಹೇಳಿದೆ.

‘ಎರಡು ವರ್ಷದ ಬಳಿಕ ಶೇ. 20ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಳ ಕಾಣಲಿದ್ದೇವೆ. ಸಾರ್ವತ್ರಿಕ ಚುನಾವಣೆಗಳ ಬಳಿಕ ಇದು ನಡೆಯಬಹುದು. ಟೆಲಿಕಾಂ ಉದ್ಯಮದ ಆರೋಗ್ಯಕ್ಕೆ ಈ ಬೆಲೆ ಹೆಚ್ಚಳ ಬಹಳ ಅವಶ್ಯ ಇದೆ. ಅದರಲ್ಲೂ ವೊಡಾಫೋನ್ ಐಡಿಯಾಗೆ ಇದು ಬೇಕಾಗಿದೆ,’ ಎಂದು ಬ್ರೋಕರೇಜ್ ಸಂಸ್ಥೆಯಾದ ಬ್ಯಾಂಕ್ ಆಫ್ ಅಮೆರಿಕಾ ಸೆಕ್ಯೂರಿಟೀಸ್​ನ ಅನಾಲಿಸ್ಟ್​ವೊಬ್ಬರು ಹೇಳಿದ್ದಾಗಿ ದಿ ಮಿಂಟ್ ಪತ್ರಿಕೆ ವರದಿ ಮಾಡಿದೆ.

2021ರ ಡಿಸೆಂಬರ್ ತಿಂಗಳಲ್ಲಿ ಟೆಲಿಕಾಂ ಕಂಪನಿಗಳು ಗಣನೀಯವಾಗಿ ದರಗಳನ್ನು ಹೆಚ್ಚಿಸಿದ್ದವು. ಅಲ್ಲಿಂದೀಚೆಗೆ ಡಾಟಾ ದರಗಳಲ್ಲಿ ಹೆಚ್ಚಿನ ಏರಿಕೆ ಆಗಿಲ್ಲ.

ಪ್ರತೀ ಬಳಕೆದಾರನಿಂದ ಸಿಗುವ ಸರಾಸರಿ ಆದಾಯವನ್ನು (ಎಆರ್​ಪಿಯು) ಎಲ್ಲಾ ಟೆಲಿಕಾಂ ಕಂಪನಿಗಳು ಕಾಣಲಿವೆ. ಈ ಹಿನ್ನೆಲೆಯಲ್ಲಿ ಏಪ್ರಿಲ್, ಮೇ ತಿಂಗಳ ನಂತರ ಶೇ. 20ರಷ್ಟು ದರ ಹೆಚ್ಚಾದರೆ ಟೆಲಿಕಾಂ ಕಂಪನಿಗಳ ಆರೋಗ್ಯ ಗಣನೀಯವಾಗಿ ಸುಧಾರಿಸುವ ಸಾಧ್ಯತೆ ಇದೆ.

ಇದೇ ವೇಳೆ, ಟೆಲಿಕಾಂ ಸೇವೆಗಳ ದರ ಹೆಚ್ಚಳದಿಂದ  ಏರ್ಟೆಲ್ ಸಂಸ್ಥೆಗೆ ಹೆಚ್ಚು ಅನುಕೂಲವಾಗಬಹುದು. ಏರ್ಟೆಲ್​ನಲ್ಲಿ ಹೈ ಎಂಡ್ ಯೂಸರ್​ಗಳ ಸಂಖ್ಯೆ ಹೆಚ್ಚಿರುವುದರಿಂದ ಅದಕ್ಕೆ ಬೆಲೆ ಏರಿಕೆಯ ಲಾಭ ಹೆಚ್ಚು ಆಗಬಹುದು ಎಂದು ಅಭಿಪ್ರಾಯಪಟ್ಟಿರುವ ಬ್ರೋಕರೇಜ್ ಸಂಸ್ಥೆ, ಇದೇ ಕಾರಣಕ್ಕೆ ಏರ್​ಟೆಲ್​ಗೆ ತಾನು ಅಂಡರ್​ಪರ್ಫಾರ್ಮಿಂಗ್ ಎಂದು ನೀಡಿದ್ದ ರೇಟಿಂಗ್ ಅನ್ನು ನ್ಯೂಟ್ರಲ್​ಗೆ ಬದಲಾಯಿಸಿದೆ.

Ashika S

Recent Posts

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

3 mins ago

ಪೆನ್‌ಡ್ರೈವ್‌ ಕೇಸ್‌ : ವಕೀಲ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌, ಮಹಿಳೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಮುಖಂಡ, ವಕೀಲರೂ ಆಗಿರುವ ದೇವರಾಜೇಗೌಡರನ್ನು 14…

14 mins ago

ರೈತನ ಆರು ತಿಂಗಳ ಶ್ರಮ ಅರ್ಧಗಂಟೆಯಲ್ಲೇ ಹೋಮ

ಇಂದು ಸಂಜೆ ಸುರಿದ ಬಾರಿ ಮಳೆಗೆ ರೈತ ಬೆಳೆದಿದ್ದ ಬಾಳೆ ಫಸಲು ಸಂಪೂರ್ಣವಾಗಿ ನಾಶವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉತ್ತುವಳ್ಳಿಯಲ್ಲಿ…

47 mins ago

ಬಾರ್ ಗೆ ನುಗ್ಗಿದ ಕಳ್ಳರು: 60 ಲೀಟರ್ ಮದ್ಯ ಕಳ್ಳತನ

ಜಿಲ್ಲೆಯ ಹನೂರು ಪಟ್ಟಣದ ಬಂಡಳ್ಳಿ ಮುಖ್ಯ ರಸ್ತೆಯಲ್ಲಿರುವ ಅಮೃತ್ ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ತಡ ರಾತ್ರಿ ಕಳ್ಳರ ತಂಡ…

1 hour ago

ಬಾಳೆ ಬೆಳೆಗಾರರಿಗೆ ವಿಶೇಷ ಪ್ಯಾಕೇಜ್ ಕೋರಿ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ

ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ಚಾಮರಾಜನಗರದ ಸತ್ಯಮಂಗಲಂ ಮುಖ್ಯ ರಸ್ತೆಯಲ್ಲಿ ಜಮಾಯಿಸಿದ ಸಂಘದ ಪದಾಧಿಕಾರಿಗಳು…

1 hour ago

ಗಾಳಿ ಸಮೇತ ಭಾರಿ ಮಳೆ : ನೆಲಕಚ್ಚಿದ ಮರಗಳು

ಧಾರವಾಡದಲ್ಲಿ ಶನಿವಾರ ಗಾಳಿ ಸಮೇತ ಮಳೆಯಾಗಿದ್ದು, ಅಲ್ಲಲ್ಲಿ ಮರಗಳು ನೆಲಕಚ್ಚಿದ ಬಗ್ಗೆ ವರದಿಯಾಗಿದೆ. ಬೆಳಿಗ್ಗೆಯಿಂದ ವಿಪರೀತ ಬಿಸಿಲಿನ ವಾತಾವರಣವಿತ್ತು

2 hours ago