Categories: ದೆಹಲಿ

ಓವೈಸಿ ವಿರುದ್ಧ ದೂರು ದಾಖಲಿಸಿದ ಹಿಂದೂ ಸೇನೆ: ಕಾರಣ ಗೊತ್ತ?

ಹೊಸದಿಲ್ಲಿ: ಅಯೋಧ್ಯೆಯ ಶ್ರೀರಾಮಮಂದಿರದ ಕುರಿತು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಉದ್ಧಟತನದ ಹೇಳಿಕೆ ನೀಡಿದ್ದಾರೆ ಎಂದು ಇಂದು(ಜ.02) ಹಿಂದೂ ಸೇನೆ ದೆಹಲಿ ಪೊಲೀಸರಿಗೆ ದೂರು ನೀಡಿದೆ.

ದೆಹಲಿ ಪೊಲೀಸ್ ಆಯುಕ್ತರಿಗೆ ಲಿಖಿತ ರೂಪದಲ್ಲಿ ದೂರನ್ನು ಸಲ್ಲಿಸಿದ ಹಿಂದೂ ಸೇನೆಯ ರಾಷ್ಟ್ರೀಯ ಅಧ್ಯಕ್ಷ ವಿಷ್ಣು ಗುಪ್ತಾ, ಓವೈಸಿ ವಿರುದ್ಧ ಶಿಸ್ತಿನ ಕ್ರಮ ಕೈಗೊಳ್ಳಲು ಕ್ರಮಗಳುವಂತೆ ತಿಳಿಸಿದ್ದಾರೆ.

ಭಾರತದಲ್ಲಿ ಕೋಮು ಸೌಹಾರ್ದತೆಯನ್ನು ಉಂಟುಮಾಡಲು ಪ್ರಯತ್ನಿಸುತ್ತಿರುವ ಸಾರ್ವಜನಿಕರಿಗೆ ಅಸಾದುದ್ದೀನ್ ಓವೈಸಿ ಉದ್ದೇಶಪೂರ್ವಕವಾಗಿ ಮತ್ತು ಬೇಜವಾಬ್ದಾರಿಯಿಂದ ತಪ್ಪು ಮಾಹಿತಿಯನ್ನು ನೀಡುತ್ತಿದ್ದಾರೆ ಎಂದು ಗುಪ್ತಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಜ.22ರಂದು ಉತ್ತರಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯ ಬೆನ್ನಲ್ಲೇ ತೆಲಂಗಾಣದ ಹೈದರಾಬಾದ್‌ನ ಭವಾನಿ ನಗರದಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ‘ಕೇಂದ್ರದ ಚಟುವಟಿಕೆಗಳ ಬಗ್ಗೆ ಮುಸ್ಲಿಂ ಯುವಕರು ಜಾಗರೂಕರಾಗಿರಬೇಕು ಮತ್ತು ದೇಶಾದ್ಯಂತ ಮಸೀದಿಗಳು ಜನವಸತಿಯಲ್ಲಿ ಉಳಿಯಬೇಕು.

ಕಳೆದ 500 ವರ್ಷಗಳಿಂದ ಪವಿತ್ರ ಕುರಾನ್ ಪಠಣ ಮಾಡಿದ ಸ್ಥಳವು ಇಂದು ನಮ್ಮ ಕೈಯಲ್ಲಿಲ್ಲ. ಯುವಜನರೇ ನಾವು ನಮ್ಮ ಮಸೀದಿಯನ್ನು ಕಳೆದುಕೊಂಡಿದ್ದೇವೆ. ಅಲ್ಲಿ ಏನು ಮಾಡಲಾಗುತ್ತಿದೆ ಎಂಬುದನ್ನು ನೀವು ನೋಡುತ್ತಿದ್ದೀರಿ. ನಿಮ್ಮ ಹೃದಯದಲ್ಲಿ ನೋವಿಲ್ಲವೇ?’ ಎಂದು ಓವೈಸಿ ಪ್ರಶ್ನಿಸಿದ್ದಾರೆ.

Ashika S

Recent Posts

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

11 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

17 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

32 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

49 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

1 hour ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

1 hour ago