News Karnataka Kannada
Thursday, April 25 2024
ದೆಹಲಿ

ಮೋದಿ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ- ಹೆಚ್​ಡಿ ಕುಮಾರಸ್ವಾಮಿ

ಎಸ್​​ಎಸ್​​ಎಲ್​ಸಿ ಮಕ್ಕಳ ಕಿಸೆಗೂ ಸರ್ಕಾರ ಕೈ ಹಾಕಿದೆ ಸರ್ಕಾರ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
Photo Credit : News Kannada

ನವದೆಹಲಿ: ಅಚ್ಚರಿಯ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ರಾಜಕೀಯ ನಾಯಕ ಎಂದರೆ ಹೆಚ್​ಡಿ ಕುಮಾರಸ್ವಾಮಿ ಎಂದರೆ ತಪ್ಪಾಗಲಾರದು. ಅದೇರೀತಿ ವಿಧಾನಸಭೆಯಲ್ಲಿ ಅವರು ನೀಡಿದ ಹೇಳಿಕೆ ಬಿಜೆಪಿ ಮುಖಂಡರ ಸಹಿತ ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ.

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡುತ್ತಿದ್ದ ಸಂದರ್ಭದಲ್ಲಿ ಆಪರೇಷನ್ ಕಮಲದ ಪ್ರಸ್ತಾಪವಾಯಿತು. ಅಷ್ಟರಲ್ಲಿ ಮಧ್ಯಪ್ರವೇಶ ಮಾಡಿ ಮಾತನಾಡಿದ ಕುಮಾರಸ್ವಾಮಿ, ಆಪರೇಷನ್ ಕಮಲ ಎಂಬುದು ಇತ್ತು‌. ಆದರೆ ಮಾಧ್ಯಮಗಳಲ್ಲಿ ಕಳೆದ ಕೆಲವು ದಿನಗಳಿಂದ ಆಪರೇಷನ್ ಹಸ್ತ ಎಂಬ ಸುದ್ದಿ ಬರುತ್ತಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಏಕೆ ಅವರ ಜೊತೆ ಸೇರಿಕೊಂಡಿದ್ದೀರಿ ಎಂದು ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

ಸಿದ್ದರಾಮಯ್ಯ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿ‌ ಅವರು 2019ರಲ್ಲಿ ನನ್ನ ಜೊತೆ ಒಂದೂವರೆ ಗಂಟೆ ಚರ್ಚೆ ಮಾಡಿದ್ದರು‌. ಅವರ ಮಾತು ಕೇಳಿದ್ದರೆ ಐದು ವರ್ಷ ಸಿಎಂ ಆಗಿರುತ್ತಿದ್ದೆ ಎಂದು ಹೇಳಿದರು. ಪದೇ ಪದೇ ಬಿಜೆಪಿಯ ಬಿ ಟೀಂ ಎಂದು ಜೆಡಿಎಸ್​​ ಅನ್ನು ಟೀಕಿಸುವ ಮುನ್ನ ಈ ವಿಚಾರ ತಿಳಿದಿರಲಿ ಎಂದು ಕುಮಾರಸ್ವಾಮಿ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು