News Karnataka Kannada
Thursday, May 02 2024
ದೆಹಲಿ

ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ.
Photo Credit : NewsKarnataka

ನವದೆಹಲಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ ಮಾಡಿದ್ದಾರೆ.

ತಮ್ಮಎಕ್ಸ್  ಖಾತೆಯಲ್ಲಿ ಪ್ರಥಮ ಬಾರಿಗೆ ಮತದಾನ ಮಾಡಲಿರುವ ನನ್ನ ಯುವ ಮಿತ್ರರಲ್ಲಿ ವಿಶೇಷ ಮನವಿ ಮಾಡುತ್ತೇನೆ, ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಬೇಕು. ಪ್ರಜಾಪ್ರಭುತ್ವದಲ್ಲಿ, ಪ್ರತಿ ಮತವೂ ಅಮೂಲ್ಯವಾಗಿದೆ ಮತ್ತು ಪ್ರತಿ ಧ್ವನಿಯೂ ಮುಖ್ಯವಾಗಿದೆ.

ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬ ಇಂದಿನಿಂದ ಆರಂಭ, ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಮತದಾನ ನಡೆಯಲಿದೆ. ಈ ಎಲ್ಲಾ ಸ್ಥಾನಗಳ ಮತದಾರರು ತಮ್ಮ ಹಕ್ಕು ಚಲಾಯಿಸಲು ಮತ್ತು ಮತದಾನದಲ್ಲಿ ಹೊಸ ದಾಖಲೆಯನ್ನು ರಚಿಸಬೇಕೆಂದು ನಾನು ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

ದೇಶದ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಲೋಕಸಭಾ ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು