News Karnataka Kannada
Tuesday, April 30 2024
ದೆಹಲಿ

ಸ್ವಾತಂತ್ರ್ಯ ದಿನಾಚರಣೆ: 1800 ಗಣ್ಯರಿಗೆ ಆಹ್ವಾನ ನೀಡಿದ ಕೇಂದ್ರ ಸರ್ಕಾರ

Independence Day: Govt invites 1,800 dignitaries
Photo Credit : IANS

ನವದೆಹಲಿ: ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸಬೇಕೆಂಬ ಕಾರಣಕ್ಕಾಗಿ ದೇಶಾದ್ಯಂತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 1800 ಮಂದಿ ವಿಶೇಷ ವ್ಯಕ್ತಿಗಳಿಗಳನ್ನು ಆಹ್ವಾನಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ನವದೆಹಲಿಯ ಕೆಂಪುಕೋಟೆಯ ಬಳಿ ನಡೆಯಲಿರುವ ಸ್ವತಂತ್ರ್ಯ ದಿನಾಚರಣೆಗೆ ದೇಶದಾದ್ಯಂತ ಒಟ್ಟು 1800 ಮಂದಿ ಆಹ್ವಾನಿಸಲಾಗಿದ್ದು, ಶಿಕ್ಷಕರು, ಮೀನುಗಾರರು, ಕುಶಲಕರ್ಮಿಗಳು ಮತ್ತು ವಿವಿಧ ಕಾರ್ಯಕ್ರಮಗಳ ಫಲಾನುಭವಿಗಳನ್ನು ಒಳಗೊಂಡಂತೆ ಕರ್ನಾಟಕದಿಂದ ಆಯ್ಕೆಯಾದ ಒಟ್ಟು 31 ವ್ಯಕ್ತಿಗಳು ನವದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯನ್ನು ವೀಕ್ಷಿಸಲಿದ್ದಾರೆ.

ಪಿಎಂ-ಕಿಸಾನ್ ಯೋಜನೆಯ ದಾದಿಯರು, ರೈತರು ಮತ್ತು ಫಲಾನುಭವಿಗಳನ್ನು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಸಮಾರಂಭದಲ್ಲಿ ಭಾಗವಹಿಸಲು ದೇಶಾದ್ಯಂತ ಆಹ್ವಾನಿಸಲಾಗಿದೆ.

ಈ ಸ್ವಾತಂತ್ರ್ಯ ದಿನಾಚರಣೆಯು ಮೇರಿ ಮಾಠಿ ಮೇರಾ ದೇಶ್ ಅಭಿಯಾನದ ಮೂಲಕ ದೇಶದ ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತದೆ. ಈ ಅಭಿಯಾನವನ್ನು ಪ್ರಧಾನಿ ನರೇಂದ್ರ ಮೋದಿಯವರು ಜುಲೈ 30 ರಂದು ತಮ್ಮ 103 ನೇ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ಘೋಷಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು