News Karnataka Kannada
Wednesday, May 01 2024
ದೆಹಲಿ

ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆಮಾಡಲಾಗಿದೆ.
Photo Credit : News Kannada

ದೆಹಲಿ: ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆಮಾಡಲಾಗಿದೆ.

ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಈ ಮುಂಚೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಇಂಡಿಯಾ ಮೈತ್ರಿಕೂಟದ ಸಂಚಾಲಕರಾಗಲು ಕೇಳಲಾಗಿತ್ತು ಆದರೆ ಪ್ರಸ್ತಾವನೆಯನ್ನು ನಿತೀಶ್​ ನಿರಾಕರಿಸಿದ್ದಾರೆ.

ವಾಸ್ತವವಾಗಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಯಿತು.

ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಸಭೆಗೆ ಹಾಜರಾಗಿರಲಿಲ್ಲ. ಸಭೆ ಮುಗಿದ ಬಳಿಕ ಬಿಹಾರ ಸಚಿವ ಸಂಜಯ್ ಝಾ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು