ನವದೆಹಲಿ: ಇಂಡಿಯಾ ಒಕ್ಕೂಟದಲ್ಲಿ ಮೊದಲ ಅಪಸ್ವರ ಇದೀಗ ಕೇಳಿಬಂದಿದೆ. ಮಧ್ಯ ಪ್ರದೇಶ ಚುನಾವಣೆಗೆ ಮೈತ್ರಿ ವಿಚಾರದಲ್ಲಿ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ‘ಕೈ’ ಪಡೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಈಗಿರುವ ಗೊಂದಲವು ಮುಂದುವರಿದರೆ ಇಂಡಿಯಾ ಮೈತ್ರಿಕೂಟವು ಬಿಜೆಪಿಯನ್ನು ಸೋಲಿಸಲು ಎಂದಿಗೂ ಸಾಧ್ಯವಾಗುವುದಿಲ್ಲ ಎಂದು ಯಾದವ್ ಶುಕ್ರವಾರ ಹೇಳಿದ್ದಾರೆ.
ದೇಶಕ್ಕೆ 2024 ರಲ್ಲಿ ದೊಡ್ಡ ಸವಾಲಿದೆ. ಬಿಜೆಪಿ ಒಂದು ದೊಡ್ಡ ಪಕ್ಷವಾಗಿದೆ. ಅದು ಅತ್ಯಂತ ಸಂಘಟಿತವಾಗಿ ಸಜ್ಜಾಗಿದೆ. ಆದ್ದರಿಂದ ಅದನ್ನು ಎದುರಿಸಲು ಇಂಡಿಯಾ ಮೈತ್ರಿಕೂಟದಲ್ಲಿ ಯಾವುದೇ ಗೊಂದಲ ಉಂಟಾಗಬಾರದು. ನೀವು ಗೊಂದಲದಿಂದ ಬಿಜೆಪಿಯನ್ನು ಎದುರಿಸಿದರೆ, ನೀವು ಯಶಸ್ವಿಯಾಗುವುದಿಲ್ಲ ಎಂದು ಅಖಿಲೇಶ್ ಹೇಳಿದ್ದಾರೆ.
ರಾಷ್ಟ್ರವ್ಯಾಪಿ ಜಾತಿ ಆಧಾರಿತ ಜನಗಣತಿಗೆ ಕಾಂಗ್ರೆಸ್ಸಿನ ಬೇಡಿಕೆಯ ಬಗ್ಗೆ ಟೀಕಾ ಪ್ರಹಾರ ನಡೆಸಿದ ಅವರು, ಇದೊಂದು ಪವಾಡ ಎಂದು ಹೇಳಿದ್ದಾರೆ. ದೇಶದ ಅತ್ಯಂತ ಹಳೆಯ ಪಕ್ಷವು ಜಾತಿ ಗಣತಿಯನ್ನು ಬೆಂಬಲಿಸಿರುವುದು ‘ಪವಾಡ’ವೇ ಸರಿ. ಹಿಂದುಳಿದ ಜಾತಿಗಳ ಬೆಂಬಲವಿಲ್ಲದೆ ಯಶಸ್ವಿಯಾಗುವುದು ಸಾಧ್ಯವಿಲ್ಲ ಎಂಬ ಕಾರಣಕ್ಕಾಗಿ ಕಾಂಗ್ರೆಸ್ ಜಾತಿ ಗಣತಿಯ ಬೇಡಿಕೆಯನ್ನು ಬೆಂಬಲಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾರು ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್ ಮಾಡಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಬ್ಯಾಂಕ್ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…