News Karnataka Kannada
Sunday, May 05 2024
ದೆಹಲಿ

ಭಾರತ ಕೆನಡಾ ಸಂಬಂಧ: ಪ್ರಧಾನಿ ಭೇಟಿಯಾದ ಜೈಶಂಕರ್‌

India-Canada relations: Jaishankar meets PM Modi
Photo Credit : News Kannada

ಹೊಸದಿಲ್ಲಿ: ಕೆನಡಾದೊಂದಿಗೆ ನಡೆಯುತ್ತಿರುವ ರಾಜತಾಂತ್ರಿಕ ಉದ್ವಿಗ್ನತೆ ನಡುವೆಯೇ ವಿದೇಶಾಂಗ ಸಚಿವ ಎಸ್ ಜೈಶಂಕರ್ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಜೂನ್‌ನಲ್ಲಿ ಕೆನಡಾದಲ್ಲಿ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆಯಲ್ಲಿ ಭಾರತೀಯ ಸರ್ಕಾರಿ ಏಜೆಂಟರ ಪಾತ್ರವಿದೆ ಎಂದು ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೋಮವಾರ ಹೌಸ್ ಆಫ್ ಕಾಮನ್ಸ್‌ ನಲ್ಲಿ ಹೇಳಿದ್ದರು.

ಈ ಬಳಿಕ ಉಭಯ ದೇಶಗಳ ನಡುವೆ ಸಂಬಂಧ ಹಳಸಿದೆ. ಭಾರತ-ಕೆನಡಾ ಸಂಬಂಧಗಳ ಕುರಿತು ಚರ್ಚಿಸಲು ಪ್ರಧಾನಿ ಮೋದಿ ಮತ್ತು ಜೈಶಂಕರ್ ಹೊಸ ಸಂಸತ್ ಭವನದಲ್ಲಿ ಭೇಟಿಯಾಗುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.

ನಿಜ್ಜರ್, (45) ಭಾರತೀಯ ಭಯೋತ್ಪಾದಕ ಮತ್ತು ನಿಷೇಧಿತ ಖಲಿಸ್ತಾನ್ ಟೈಗರ್ ಫೋರ್ಸ್ (ಕೆಟಿಎಫ್) ಮುಖ್ಯಸ್ಥನಾಗಿದ್ದು, ಆತನನ್ನು ಜೂನ್ 18 ರಂದು ಬ್ರಿಟಿಷ್ ಕೊಲಂಬಿಯಾದ ಸರ್ರೆಯ ಗುರುದ್ವಾರದ ಹೊರಗೆ ಅಪರಿಚಿತರು ಹತ್ಯೆ ಮಾಡಿದ್ದರು. ಈತಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದು, ಆತನ ತಲೆಗೆ
ಭಾರತ 10 ಲಕ್ಷ ರೂ. ಬಹುಮಾನ ಘೋಷಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು