Categories: ದೆಹಲಿ

ಭಾರತವು ಶ್ರೀಲಂಕಾಗೆ ಸಹಾಯ ಮಾಡುವತ್ತ ಗಮನ ಕೊಡುತ್ತಿದೆ: ಸಚಿವ ಎಸ್.‌ ಜೈಶಂಕರ್‌

ದೆಹಲಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಭಾನುವಾರ ಶ್ರೀಲಂಕಾದಲ್ಲಿನ ಆರ್ಥಿಕ ಬಿಕ್ಕಟ್ಟನ್ನು “ಗಂಭೀರ ವಿಷಯ” ಎಂದು ಕರೆದಿದ್ದಾರೆ ಮತ್ತು ಈ ಸಮಯದಲ್ಲಿ ಭಾರತವು ಅವರಿಗೆ ಸಹಾಯ ಮಾಡುವತ್ತ ಗಮನ ಕೊಡುತ್ತಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿಯವರ ‘ನೆರೆಹೊರೆ ಮೊದಲು’ ನೀತಿಯ ಪ್ರಕಾರ ನಮ್ಮ ನೆರೆಹೊರೆಯವರ ಅವಶ್ಯಕತೆಗಳನ್ನು ಪೂರೈಸುವ ರೀತಿಯಲ್ಲಿ ಭಾರತವು ತನ್ನ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ಭಾರತವು ಈ ಹಿಂದೆ ಶ್ರೀಲಂಕಾಕ್ಕೆ ಲೈನ್‌ ಆಫ್‌ ಕ್ರೆಡಿಟ್‌ ಮೂಲಕ ಸಾಲದ ಸಹಾಯವನ್ನು ನೀಡಿದ್ದು ಇದು ಕಳೆದ ಹಲವಾರು ತಿಂಗಳುಗಳಿಂದ ಅಗತ್ಯ ಸರಕುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿದೆ ಎಂದ ಜೈ ಶಂಕರ್‌ “ನಾವು ಇಂಧನ ಖರೀದಿಗೂ ಸಹ ಅವರಿಗೆ ಲೈನ್‌ ಆಫ್‌ ಕ್ರೆಡಿಟ್‌ ಅನ್ನು ಒದಗಿಸಿದ್ದೇವೆ. ಈ ವರ್ಷವೇ, ನಾವು ಶ್ರೀಲಂಕಾಕ್ಕೆ $ 3.8 ಶತಕೋಟಿ ಬೆಂಬಲವನ್ನು ನೀಡಿದ್ದೇವೆ” ಎಂದಿದ್ದಾರೆ.

ಈ ನಡುವೆ ಭಾರತವು ಶ್ರೀಲಂಕಾಗೆ ಸೇನೆಯನ್ನು ಕಳಿಸುತ್ತದೆ ಎಂಬ ವರದಿಗಳು ಹರಿದಾಡುತ್ತಿವೆ. ಆದರೆ ವಿದೇಶಾಂಗ ಸಚಿವಾಲಯ ಇದನ್ನು ಸ್ಪಷ್ಟವಾಗಿ ತಳ್ಳಿಹಾಕಿದೆ.

Sneha Gowda

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

27 mins ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

56 mins ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

1 hour ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

2 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

2 hours ago