ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 756 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕಳೆದ ಒಂದು ದಿನದಲ್ಲಿ ಐವರು ಸೋಂಕಿಗೆ ಬಲಿಯಾಗಿದ್ದಾರೆ. ಕೇರಳ, ಮಹಾರಾಷ್ಟ್ರದಲ್ಲಿ ತಲಾ 2 ಹಾಗೂ ಜಮ್ಮು ಕಾಶ್ಮೀರದಲ್ಲಿ ಒಬ್ಬರು ಮೃತಪಟ್ಟಿದ್ದಾರೆ.
ಕರ್ನಾಟಕದಲ್ಲಿ ಒಟ್ಟು 297 ಸಕಾರಾತ್ಮಕ ಪ್ರಕರಣಗಳು ವರದಿಯಾಗಿದೆ, 4 ಗಂಟೆಗಳಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಮಹಾರಾಷ್ಟ್ರದಲ್ಲಿ 154 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ, ಇಬ್ಬರು ಮೃತಪಟ್ಟಿದ್ದಾರೆ. ಇದೀಗ 139 ಜೆಎನ್.1 ಪ್ರಕರಣಗಳು ಪತ್ತೆಯಾಗಿವೆ.
ಕೋಲ್ಕತ್ತಾದ ಕನಿಷ್ಠ ಮೂರು ಖಾಸಗಿ ಆಸ್ಪತ್ರೆಗಳಲ್ಲಿ ಈಗ 13 ಕೋವಿಡ್ ರೋಗಿಗಳನ್ನು ದಾಖಲಿಸಲಾಗಿದೆ.