ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದ್ದು, ತಮಿಳುನಾಡು ಮತ್ತು ಗುಜರಾತ್ನಿಂದ ತಲಾ ಒಬ್ಬರು ಸಾವಿಗೀಡಾಗಿದ್ದಾರೆಂದು ತಿಳಿದುಬಂದಿದೆ. ಡಿಸೆಂಬರ್ 5 ರವರೆಗೆ ಎರಡಂಕಿಯಲ್ಲಿದ್ದ ಸೋಂಕಿತರ ಸಂಖ್ಯೆ ಇದೀಗ ಮೂರಂಕಿಗೆ ತಲುಪಿದೆ.
ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ. ಕೋವಿಡ್ ನಿಂದ ಈ ವರೆಗೆ ಸಾವನ್ನಪ್ಪಿರುವವರ ಒಟ್ಟು ಸಂಖ್ಯೆ 5,33,387ಕ್ಕೆ ಏರಿಕೆಯಾಗಿದೆ.